ಹಾಸನ: ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸಿಗೆ, ದಿಂಬು ವಶಕ್ಕೆ ಪಡೆದ ಎಸ್‌ಐಟಿ

ಹಾಸನ: ನೂರಾರು ಮಹಿಳೆಯರಿಗೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಎದುರಿಸುತ್ತಿರುವ ಪ್ರಜ್ವಲ್ ರೇವಣ್ಣ ವಿದೇಶದಿಂದ ಬೆಂಗಳೂರಿಗೆ ಮರಳುವ ದಿನಾಂಕ ಸಮೀಪಿಸುತ್ತಿದ್ದಂತೆಯೇ ಎಸ್ ಐಟಿ ತನಿಖೆ ಚುರುಕುಗೊಳಿಸಿದೆ.
ಪಈ ಪ್ರಕರಣದ ತನಿಖೆಗಾಗಿ ರಚಿಸಲಾದ ವಿಶೇಷ ತನಿಖಾ ತಂಡ (ಎಸ್‌ಐಟಿ) ಮತ್ತು ವಿಧಿ ವಿಜ್ಞಾನ ಪ್ರಯೋಗಾಲಯದ (ಎಸ್‌ಎಫ್‌ಎಲ್) ಅಧಿಕಾರಿಗಳು ಪ್ರಜ್ವಲ್ ರೇವಣ್ಣ ಅವರ ಅಧಿಕೃತ ಕ್ವಾರ್ಟರ್ಸ್‌ಗೆ ಮಂಗಳವಾರ ರಾತ್ರಿ ಭೇಟಿ ನೀಡಿದ್ದಾರೆ ಎಂದು ವರದಿಯಾಗಿದೆ.
ಬುಧವಾರ ಬೆಳಗ್ಗೆ 10 ಗಂಟೆಯವರೆಗೆ ಕ್ವಾರ್ಟರ್ಸ್‌ನಲ್ಲಿದ್ದ ಅಧಿಕಾರಿಗಳು, ವಿವಿಧ ಮಾದರಿಗಳು ಮತ್ತು ಸಾಕ್ಷ್ಯಗಳನ್ನು ಸಂಗ್ರಹಿಸಿದರು. ಎಸ್‌ಐಟಿ ಮತ್ತು ಎಫ್‌ಎಸ್‌ಎಲ್ ಜಂಟಿಯಾಗಿ 10 ಗಂಟೆಗಳ ಕಾಲ ನಿರಂತರವಾಗಿ ಕ್ವಾರ್ಟರ್ಸ್ ತಪಾಸಣೆ ನಡೆಸಿದೆ. ಹಾಗೂ ಪ್ರಜ್ವಲ್ ಮಲಗುತ್ತಿದ್ದ ಮೂರು ಬೆಡ್‌ರೂಮ್‌ಗಳಿಂದ ಬೆಡ್‌ಗಳು, ಬೆಡ್‌ಶೀಟ್‌ಗಳು, ದಿಂಬು, ಬ್ಲಾಂಕೆಟ್‌ಗಳು, ನ್ಯಾಪ್‌ಕಿನ್‌ಗಳು ಮತ್ತು ಬಟ್ಟೆಗಳನ್ನು ಸಂಗ್ರಹಿಸಿದೆ.
ಎಫ್‌ಎಸ್‌ಎಲ್ ಅಧಿಕಾರಿಗಳು ಬೆರಳಚ್ಚುಗಳ ಛಾಯಾಚಿತ್ರಗಳನ್ನೂ ತೆಗೆದುಕೊಂಡರು. ಮೇ 31ರಂದು ಪ್ರಜ್ವಲ್ ಭಾರತಕ್ಕೆ ವಾಪಸಾಗುತ್ತಿರುವ ಹಿನ್ನೆಲೆಯಲ್ಲಿ ಎಸ್‌ಐಟಿ ತೀವ್ರ ನಿಗಾ ವಹಿಸಿದೆ. ಮನೆಯಲ್ಲಿ ಏನೆಲ್ಲಾ ವಸ್ತುಗಳನ್ನು ತೆಗೆದುಕೊಳ್ಳಲಾಯಿತು ಎಂಬುದನ್ನು ಮಾಧ್ಯಮಗಳೊಂದಿಗೆ ಹಂಚಿಕೊಳ್ಳಲು ಅಧಿಕಾರಿಗಳು ನಿರಾಕರಿಸಿದ್ದಾರೆ.

ಪ್ರಮುಖ ಸುದ್ದಿ :-   ಕರ್ನಾಟಕ ವಿಧಾನ ಪರಿಷತ್‌ ಚುನಾವಣೆ: ಬಿಜೆಪಿ-ಜೆಡಿಎಸ್ ಶಾಸಕರ ‘ಅಡ್ಡ ಮತದಾನ ’ ಕಾಂಗ್ರೆಸ್ ಕೈ ಹಿಡಿದದ್ದು ಹೇಗೆ ?

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement