ಹಿರಿಯ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು

ದಾವಣಗೆರೆ: ಕಾಂಗ್ರೆಸ್ ಹಿರಿಯ ನಾಯಕ, ಶಾಸಕ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಅವರನ್ನು ತಕ್ಷಣ ಎಸ್‌ಎಸ್ ಹೈಟೆಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕರೆದುಕೊಂಡು ಹೋಗಲಾಗಿದೆ.
ಶಾಮನೂರು ಶಿವಶಂಕರಪ್ಪ ಅವರಿಗೆ ಉಸಿರಾಟ ಹಾಗೂ ಕಫದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೂಡಲೇ ದಾವಣಗೆರೆ ನಗರದ ಎಸ್. ಎಸ್. ಹೈಟೆಕ್ ಆಸ್ಪತ್ರೆಗೆ ದಾಖಲಿಸಿ, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಯಿತು.

ಉಸಿರಾಟ ಹಾಗೂ ಕಫದ ತೊಂದರೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರನ್ನು ದಾವಣಗೆರೆ ಎಸ್ ಎಸ್ ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲ ಹೊತ್ತು ಶಾಮನೂರು ಶಿವಶಂಕರಪ್ಪ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಯಿತು. ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ತಾತ್ಕಾಲಿಕ ಪೇಸ್‌ ಮೇಕರ್‌ ಅಳವಡಿಸಲಾಗಿದ್ದು, ನಂತರ ಉಸಿರಾಟ ಸಹಜ ಸ್ಥಿತಿಗೆ ಬಂದಿದೆ, ಬಳಿಕ ಬೆಂಗಳೂರಿನ ಸ್ಪರ್ಷ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ಕರೆದುಕೊಂಡು ಹೋಗಲಾಗಿದೆ. ಅಲ್ಲಿ ಅವರಿಗೆ ಪರ್ಮನೆಂಟ್‌ ಪೇಸ್‌ ಮೇಕರ್‌ ಅಳವಡಿಸಲಾಗುತ್ತದೆ ಎಂದು ವರದಿಯಾಗಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು,ಯಾವುದೇ ತೊಂದರೆ ಇಲ್ಲ ಎಂದು ಹೇಳಲಾಗಿದೆ.

ಪ್ರಮುಖ ಸುದ್ದಿ :-   ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement