ಕರ್ನಾಟಕ ವಿಧಾನ ಪರಿಷತ್ ಚುನಾವಣೆ : ಸಿಎಂ ಸಿದ್ದರಾಮಯ್ಯ ಪುತ್ರ ಸೇರಿ 8 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಕಾಂಗ್ರೆಸ್

ಬೆಂಗಳೂರು :  ಕರ್ನಾಟಕ ವಿಧಾನ ಪರಿಷತ್ತು ಚುನಾವಣೆಗೆ ಕಾಂಗ್ರೆಸ್‌ ತನ್ನ 8 ಅಭ್ಯರ್ಥಿಗಳ ಪಟ್ಟಿಯನ್ನು ಭಾನುವಾರ ಪ್ರಕಟಿಸಿದೆ. ಹಿರಿಯರು, ಹಾಲಿ ಸದಸ್ಯರಿಗೆ ಆದ್ಯತೆ ನೀಡಲಾಗಿದೆ. ಈ ಬಗ್ಗೆ ಕಾಂಗ್ರೆಸ್‌ ಮಾಧ್ಯಮ ಮಾಹಿತಿ ನೀಡಿದ್ದು, ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕ ವಿಧಾನ ಪರಿಷತ್ತು ಚುನಾವಣೆ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿಗೆ ಅನುಮೋದನೆ ನೀಡಿದ್ದಾರೆ ಎಂದು ತಿಳಿಸಿದೆ. ಸೋಮವಾರ ಎಲ್ಲಾ ಅಭ್ಯರ್ಥಿಗಳೂ ನಾಮಪತ್ರ ಸಲ್ಲಿಕೆ ಮಾಡಲಿದ್ದು, ಜೂನ್ 13ರಂದು ಚುನಾವಣೆ ನಡೆಯಲಿದೆ.
ಕಾಂಗ್ರೆಸ್‌ ಅಭ್ಯರ್ಥಿಗಳು…
ಯತೀಂದ್ರ ಸಿದ್ದರಾಮಯ್ಯ
ಗೋವಿಂದರಾಜು
ಐವಾನ್ ಡಿಸೋಜ
ಬಿಲ್ಕಿಸ್ ಬಾನು
ಬೋಸರಾಜು
ಜಗದೇವ ಗುತ್ತೇದಾರ
ವಸಂತಕುಮಾರ
ಬಸನಗೌಡ ಬಾದರ್ಲಿ ಅವರಿಗೆ ಟಕೆಟ್‌ ನೀಡಲಾಗಿದೆ.
ಸಿದ್ದರಾಮಯ್ಯಗೆ ಕ್ಷೇತ್ರ ಬಿಟ್ಟುಕೊಟ್ಟಿದ್ದ ಯತೀಂದ್ರ ಅವರಿಗೆ ಕಾಂಗ್ರೆಸ್‌ ಹೈಕಮಾಂಡ್‌ ವಿಧಾನ ಪರಿಷತ್‌ ನೀಡಿದೆ. ಅಲ್ಪಸಂಖ್ಯಾತ ಕೋಟದಡಿ ಐವಾನ್ ಡಿಸೋಜ ಹಾಗೂ ಬಲ್ಕಿಸ್ ಬಾನು ಆಯ್ಕೆಯಾಗಿದ್ದಾರೆ. ಇನ್ನು ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿಯಲ್ಲಿ 8 ಮಂದಿ ಹೆಸರು ಘೋಷಣೆ ಮಾಡಿದೆ. ಈ ಪೈಕಿ 7 ಮಂದಿ ಹಾಲಿ ವಿಧಾನ ಪರಿಷತ್ತು ಚುನಾವಣೆಗೆ ಟಿಕೆಟ್‌ ನೀಡಲಾಗಿದೆ. ಉಳಿದಂತೆ ಜಗದೀಶ್‌ ಶೆಟ್ಟರ್‌ ಅವರ ರಾಜೀನಾಮೆ ಬಳಿಕ ತೆರುವಾದ ಸ್ಥಾನಕ್ಕೆ ನಡೆಯಲಿರುವ ಮುಂಬರುವ ವಿಧಾನ ಪರಿಷತ್ ಚುನಾವಣೆಗೆ ಬಸನಗೌಡ ಬಾದರ್ಲಿ ಅವರಿಗೆ ಟಿಕೆಟ್‌ ನೀಡಲಾಗಿದೆ.

ಪ್ರಮುಖ ಸುದ್ದಿ :-   ಶಾಸಕ ಸ್ಥಾನದಿಂದ ಅನರ್ಹಗೊಂಡ ಜನಾರ್ದನ ರೆಡ್ಡಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement