ಭಾರೀ ಮಳೆ ಮುನ್ಸೂಚನೆ : ಕರ್ನಾಟಕದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯಕ್ಕೆ ಭಾನುವಾರ ಮುಂಗಾರು ಪ್ರವೇಶವಾಗಿದೆ. ಹೀಗಾಗಿ, ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಸೋಮವಾರ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಮುಂದಿನ 24 ಗಂಟೆಗಳಿಗೆ (ಜೂನ್‌ ೩)ದಕ್ಷಿಣ ಕನ್ನಡ, ಉತ್ತರ ಕರ್ನಾಟಕ ಭಾಗದ ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳ ಮುಂತಾದ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಗಾಳಿ 40 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಬೀಸಲಿದೆ.

ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ವಿಜಯನಗರ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 48 ಗಂಟೆಗಳಲ್ಲಿ ಒಳನಾಡಿನಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನ 2 ರಿಂದ 3 ಡಿಗ್ರಿ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಪ್ರಮುಖ ಸುದ್ದಿ :-   ಸಾಹಿತಿ ದೊಡ್ಡರಂಗೇಗೌಡರ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು

5 / 5. 4

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement