ಸಂತ್ರಸ್ತೆ ಅಪಹರಣ ಪ್ರಕರಣ : ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್‌ ಕದತಟ್ಟಿದ ಭವಾನಿ ರೇವಣ್ಣ..

ಬೆಂಗಳೂರು : ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅತ್ಯಾಚಾರ ಹಗರಣಕ್ಕೆ ಸಂಬಂಧಿಸಿದ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಕರ್ನಾಟಕ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಅರ್ಜಿ ವಿಚಾರಣೆಗೆ ನಿಗದಿಯಾಗಬೇಕಿದೆ.
ವಿಶೇಷ ನ್ಯಾಯಾಲಯವು ಮೇ 31ರಂದು ಭವಾನಿ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಭವಾನಿ ಹೈಕೋರ್ಟ್‌ ಕದತಟ್ಟಿದ್ದಾರೆ.
ವಿಶೇಷ ನ್ಯಾಯಾಲಯ ನಿರೀಕ್ಷಣಾ ಜಾಮೀನು ತಿರಸ್ಕರಿಸಿದ ಬೆನ್ನಿಗೇ ಎಸ್‌ಐಟಿ ಅಧಿಕಾರಿಗಳು ಹಾಸನದ ಹೊಳೆನರಸೀಪುರದ ಅವರ ನಿವಾಸದಲ್ಲಿ ಭವಾನಿ ಅವರನ್ನು ವಿಚಾರಣೆಗೆ ಒಳಪಡಿಸಲು ಕಾಯುತ್ತಿದ್ದಾರೆ. ಆದರೆ, ಭವಾನಿ ರೇವಣ್ಣ ಅವರು ಸಿಗುತ್ತಿಲ್ಲ. ಅವರು ಮನೆಯಲ್ಲಿ ಇಲ್ಲ. ಹಾಗೂ ಎಲ್ಲಿದ್ದಾರೆಂದು ಗೊತ್ತಿಲ್ಲ.

ಭವಾನಿ ಅವರು ಮೈಸೂರಿನ ಕೆ ಆರ್‌ ನಗರದ ಠಾಣೆಯಲ್ಲಿ ಸಂತ್ರಸ್ತೆಯ ಪುತ್ರ ನೀಡಿರುವ ದೂರಿನಲ್ಲಿ ತನ್ನನ್ನು ಆರೋಪಿಯನ್ನಾಗಿ ಉಲ್ಲೇಖಿಸಿಲ್ಲ. ಮಾಧ್ಯಮಗಳಿಂದ ತನಗೆ ಎಸ್‌ಐಟಿ ನೋಟಿಸ್‌ ನೀಡಿರುವ ವಿಚಾರ ತಿಳಿದಿದೆ. ಆದರೆ, ಅಪಹರಣ ಪ್ರಕರಣದಲ್ಲಿ ತನ್ನತ್ತ ಬೆರಳು ಮಾಡುವ ದಾಖಲೆಗಳು ಇಲ್ಲ ಎಂದು ಅರ್ಜಿಯಲ್ಲಿ ಆಕ್ಷೇಪಿಸಿದ್ದಾರೆ.
ಪ್ರಕರಣದಲ್ಲಿ ಭವಾನಿ ಅವರ ಕೃತ್ಯವಿದೆ ಎನ್ನುವುದಕ್ಕೆ ಹಲವು ದಾಖಲೆಗಳಿವೆ. 2024ರ ಮೇ 13ರಂದು ತನಿಖೆಯ ಸಂದರ್ಭದಲ್ಲಿ ವಿಚಾರಣಾಧೀನ ನ್ಯಾಯಾಲಯದ ಅನುಮತಿಯ ಮೇರೆಗೆ ಐಪಿಸಿ ಸೆಕ್ಷನ್‌ 120-ಬಿ (ಪಿತೂರಿ) ಮತ್ತು ಐಪಿಸಿ ಸೆಕ್ಷನ್‌ 109ರ ಸೇರ್ಪಡೆ ಮಾಡಲಾಗಿದೆ. ಭವಾನಿ ತನ್ನ ಡ್ರೈವರ್‌ ಫೋನ್‌ನಿಂದ ರಾಜಗೋಪಾಲ ಜೊತೆ ಮಾತನಾಡಿರುವ ಮಾತುಕತೆಯ ಸಿಡಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ರಾಜಗೋಪಾಲ ಅವರ ಫಾರ್ಮ್‌ ಹೌಸ್‌ನಲ್ಲಿ ಸಂತ್ರಸ್ತೆ ಇದ್ದರು ಎಂದು ಪ್ರಾಸಿಕ್ಯೂಷನ್‌ ವಾದಿಸಿದೆ.

ಪ್ರಮುಖ ಸುದ್ದಿ :-   ಶಾಸಕ ಸ್ಥಾನದಿಂದ ಅನರ್ಹಗೊಂಡ ಜನಾರ್ದನ ರೆಡ್ಡಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement