ಎನ್‌ಡಿಎ 300ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಎನ್‌ಡಿಎ ಮುನ್ನಡೆ : ಉತ್ತರ ಪ್ರದೇಶದಲ್ಲಿ ಬಿಜೆಪಿ ಸಮಬಲದ ಠಕ್ಕರ್‌ ನೀಡುತ್ತಿರುವ ಇಂಡಿಯಾ ಮೈತ್ರಿಕೂಟ

ನವದೆಹಲಿ: ೨೦೨೪ರ ಲೋಕಸಭಾ ಚುನಾವಣೆಗೆ ಮತ ಎಣಿಕೆ ನಡೆಯುತ್ತಿದೆ. ಆರಂಭಿಕ ಪ್ರವೃತ್ತಿಗಳು ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ೩೦೦ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ. ಏತನ್ಮಧ್ಯೆ, ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಮೈತ್ರಿಕೂಟವು ೨೧೦ ಸ್ಥಾನಗಳಲ್ಲಿ ಮುಂದಿದ್ದು, ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಬಿಜೆಪಿ ಸಮಬಲದ ಠಕ್ಕರ್‌ ನೀಡುತ್ತಿದೆ.
ಉತ್ತರ ಪ್ರದೇಶದಲ್ಲಿ ಎನ್‌ಡಿಎ ೪೦ ಸ್ಥಾನಗಳಲ್ಲಿ ಮುಂದಿದ್ದರೆ ಇಂಡಿಯಾ ಒಕ್ಕೂಟ ೩೯ ಸ್ಥಾನಗಳಲ್ಲಿ ಮುಂದಿದೆ. ಮಹಾರಾಷ್ಟ್ರದಲ್ಲಿ ಎನ್‌ಡಿಎ ೨೪ ಹಾಗೂ ಇಂಡಿಯಾ ಮೈತ್ರಿಕೂಟ ೨೧ ಕ್ಷೇತ್ರಗಳಲ್ಲಿ ಮುಂದಿದೆ. ರಾಜಸ್ಥಾನದಲ್ಲಿ ಬಿಜೆಪಿ ೧೩ ಕ್ಷೇತ್ರಗಳಲ್ಲಿ ಮುಂದಿದ್ದರೆ ಕಾಂಗ್ರೆಸ್‌ ೧೨ ಕ್ಷೇತ್ರಗಳಲ್ಲಿ ಮುಂದಿದೆ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ೨೧ ಕ್ಷೇತ್ರಗಳಲ್ಲಿ ಮುಂದಿದ್ದರೆ ಬಿಜೆಪಿ ೧೭ ಕ್ಷೇತ್ರಗಳಲ್ಲಿ ಮುಂದಿದೆ. ಹರ್ಯಾಣದಲ್ಲಿ ಆಡಳಿತಾರೂಢ ಬಿಜೆಪಿ ನಾಲ್ಕು ಕ್ಷೇತ್ರಗಳಲ್ಲಿ ಮುಂದಿದ್ದರೆ ಇಂಡಿಯಾ ಮೈತ್ರಿಕೂಟ ಐದು ಕ್ಷೇತ್ರಗಳಲ್ಲಿ ಮುಂದಿದೆ. ದೆಹಲಿಯಲ್ಲಿ ಬಿಜೆಪಿ ಆರು ಕ್ಷೇತ್ರಗಳಲ್ಲಿ ಹಾಗೂ ಎಎಪಿ ಒಂದು ಕ್ಷೇತ್ರಗಳಲ್ಲಿ ಮುಂದಿದೆ.

ಕರ್ನಾಟಕದಲ್ಲಿ ಬಿಜೆಪಿ ೧೭, ಜೆಡಿಎಸ್‌ ೨ ಹಾಗೂ ಕಾಂಗ್ರೆಸ್‌ ೭ರಲ್ಲಿ ಮುನ್ನಡೆ ಸಾಧಿಸಿದೆ. ಬೆಂಗಳೂರು ಗ್ರಾಮೀಣ ಕ್ಷೇತ್ರದಲ್ಲಿ ಖ್ಯಾತ ವೈದ್ಯ ಹಾಗೂ ಮಾಜಿ ಪ್ರಧಾನಿ ದೇವೇಗೌಡರ ಅಳಿಯ ಡಾ.ಮಂಜುನಾಥಹ ಅವರು ತಮ್ಮ ಪ್ರತಿಸ್ಪರ್ಧಿ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಸಹೋದರ ಡಿ.ಕೆ.ಸುರೇಶ ಅವರಿಗಿಂತ ಐವತ್ತು ಸಾವಿರಕ್ಕೂ ಹೆಚ್ಚು ಮತಗಳ ಮುನ್ನಡೆಯಲಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ ೯೩ ಸಾವಿರಕ್ಕೂ ಹೆಚ್ಚು ಮತಗಳ ಮುನ್ನಡೆಯಲಿದ್ದಾರೆ. ಮೈಸೂರಿನಲ್ಲಿ ಮೈಸೂರು ರಾಜವಂಶದ ಯದವೀರ್‌ ಅವರು ೩೭ ಸಾವಿರಕ್ಕೂ ಹೆಚ್ಚು ಮತಗಳ ಮುನ್ನಡೆಯಲಿದ್ದಾರೆ. ಹಾಸನದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿರುವ ಹಾಲಿ ಸಂಸದ ಹಾಗೂ ದೇವೇ ಗೌಡರ ಮೊಮ್ಮಗ ೧೩೦೧ ಮತಗಳಿಂದ ಹಿಂದಿದ್ದಾರೆ. ಮಂಡ್ಯದಲ್ಲಿ ಕುಮಾರಸ್ವಾಮಿ ೩೦ ಸಾವಿರಕ್ಕೂ ಹೆಚ್ಚು ಮತಗಳಿಂದ ಮುಂದಿದ್ದಾರೆ. ಧಾರವಾಡ ಕ್ಷೇತ್ರದಲ್ಲಿ ಪ್ರಹ್ಲಾದ ಜೋಶಿ ೨೮ ಸಾವಿರಕ್ಕೂ ಹೆಚ್ಚು ಮತಗಳಿಂದ ಮುಂದಿದ್ದಾರೆ. ಬಿಜೆಪಿಯು ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಬೆಳಗಾವಿ, ಹಾವೇರಿ, ಬಾಗಲಕೋಟೆ, ವಿಜಯಪುರ, ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು, ಶಿವಮೊಗ್ಗ, ಕೊಪ್ಪಳ ಕ್ಷೇತ್ರಗಳಲ್ಲಿ ಮುಂದಿದೆ. ಕಾಂಗ್ರೆಸ್‌ ಹಾಸನ, ಚಾಮರಾಜ ನಗರ, ದಾವಣೆಗೆರೆ, ಚಿಕ್ಕೋಡಿ, ಬಳ್ಳಾರಿ, ರಾಯಚೂರು, ಕಲಬುರಗಿ, ಬೀದರ ಕ್ಷೇತ್ರಗಳಲ್ಲಿ ಮುಂದಿದೆ, ಜೆಡಿಎಸ್‌ ಮಂಡ್ಯ ಹಾಗೂ ಕೋಲಾರ ಕ್ಷೇತ್ರಗಳಲ್ಲಿ ಮುಂದಿದೆ.

ಪ್ರಮುಖ ಸುದ್ದಿ :-   ಆಪರೇಷನ್ ಸಿಂಧೂರ | ಷೇರು ಮಾರುಕಟ್ಟೆಯಲ್ಲಿ ಭಾರತದ ರಕ್ಷಣಾ ಕಂಪನಿಗಳಿಗೆ ಹೆಚ್ಚಿದ ಬೇಡಿಕೆ, ಚೀನಾ-ಟರ್ಕಿ ಕಂಪನಿಗಳ ಬೇಡಿಕೆ ಕುಸಿತ...!

ಹಿಮಾಚಲ ಪ್ರದೇಶದಲ್ಲಿ ಎಲ್ಲ ನಾಲ್ಕು ಸ್ಥಾನಗಳಲ್ಲಿ ಹಾಗೂ ಉತ್ತರಾಖಂಡದ ಎಲ್ಲ ಐದು ಸ್ಥಾನಗಳಲ್ಲಿ ಬಿಜೆಪಿ ಮುಂದಿದೆ. ಬಿಹಾರದಲ್ಲಿ ಎನ್‌ಡಿಎ ೨೯ ಕ್ಷೇತ್ರಗಳಲ್ಲಿ ಹಾಗೂ ಇಂಡಿಯಾ ಮಂಯ್ತರಿಕೂಟ ೧೧ ಕ್ಷೇತ್ರಗಳಲ್ಲಿ ಮುಂದಿದೆ. ಗುಜಾರಾತಿನಲ್ಲಿ ೨೩ ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮುಂದಿದೆ. ಕೇರಳದಲ್ಲಿ ಒಂದು ಕ್ಷೇತ್ರದಲ್ಲಿ ಎನ್‌ಡಿಎ ಹಾಗೂ ೧೪ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ ಹಾಗೂ ಐದು ಕ್ಷೇತ್ರಗಳಲ್ಲಿ ಎಡರಂಗ ಮುಂದಿದೆ. ಆಂಧ್ರದಲ್ಲಿ ಎನ್‌ಡಿಎ ೨೦ ಕ್ಷೇತ್ರಗಳಲ್ಲಿ ಎನ್‌ಡಿಎ ಹಾಗೂ ನಾಲ್ಕು ಕ್ಷೇತ್ರಗಳಲ್ಲಿ ವೈಎಸ್‌ಆರ್‌ಸಿಪಿ ಮುಂದಿದೆ. ತೆಲಂಗಾಣದಲ್ಲಿ ೯ ಕಾಂಗ್ರೆಸ್‌, ೭ರಲ್ಲಿ ಬಿಜೆಪಿ ಮುಂದಿದೆ. ತಮಿಳುನಾಡಿನಲ್ಲಿ ಡಿಎಂಕೆ ೩೦ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುಂದಿದೆ. ಎನ್‌ಡಿಎ ಒಂದು ಸ್ಥಾನದಲ್ಲಿ ಮುಂದಿದೆ.

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement