ಮಹಾರಾಷ್ಟ್ರದಲ್ಲಿ ಬಿಜೆಪಿ ಕಳಪೆ ಸಾಧನೆ ಹೊಣೆ ಹೊತ್ತ ಫಡ್ನವೀಸ್‌ : ಡಿಸಿಎಂ ಸ್ಥಾನಕ್ಕೆ ರಾಜೀನಾಮೆ ಇಂಗಿತ

ಮುಂಬೈ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಹೀನಾಯ ಸೋಲಿನ ಹೊಣೆ ಹೊತ್ತು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಮುಂದಾಗಿದ್ದಾರೆ.
ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಪಕ್ಷವನ್ನು ಬಲಪಡಿಸುವತ್ತ ಗಮನ ಹರಿಸಲು ತಮ್ಮನ್ನು ಉಪಮುಖ್ಯಮಂತ್ರಿ ಕರ್ತವ್ಯಗಳಿಂದ ಮುಕ್ತಗೊಳಿಸುವಂತೆ ಬಿಜೆಪಿ ನಾಯಕತ್ವಕ್ಕೆ ವಿನಂತಿಸಿದ್ದಾರೆ.
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಮಾತನಾಡಿದ ಫಡ್ನವೀಸ್, “ಮಹಾರಾಷ್ಟ್ರದಲ್ಲಿ ಇಂತಹ ಫಲಿತಾಂಶಗಳ ಜವಾಬ್ದಾರಿಯನ್ನು ನಾನು ಹೊರುತ್ತೇನೆ, ನಾನು ಪಕ್ಷವನ್ನು ಮುನ್ನಡೆಸುತ್ತೇನೆ. ಸರ್ಕಾರದ ಜವಾಬ್ದಾರಿಯಿಂದ ಮುಕ್ತಗೊಳಿಸುವಂತೆ ನಾನು ಬಿಜೆಪಿ ಹೈಕಮಾಂಡ್ ಗೆ ವಿನಂತಿಸುತ್ತೇನೆ. ಹೀಗಾದರೆ ಮುಂಬರುವ ಚುನಾವಣೆಯಲ್ಲಿ ನಾನು ಪಕ್ಷಕ್ಕಾಗಿ ಶ್ರಮಿಸಬಹುದು ಎಂದು ಅವರು ಹೇಳಿದರು.

ನವೆಂಬರ್‌ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿ ನಾಯಕತ್ವವು ಪಕ್ಷದ ಮೇಲೆ ಕೇಂದ್ರೀಕರಿಸಲು ಸಮಯ ನೀಡಬೇಕು ಎಂದು ಅವರು ಹೇಳಿದರು.
ಇದಕ್ಕೂ ಮುನ್ನ ಮಹಾರಾಷ್ಟ್ರದ ಬಿಜೆಪಿ ಘಟಕವು ಪಕ್ಷದ ಕಳಪೆ ಸಾಧನೆಯನ್ನು ವಿಶ್ಲೇಷಿಸಲು ಸಭೆ ನಡೆಸಿತು. ಸಭೆಯಲ್ಲಿ ದೇವೇಂದ್ರ ಫಡ್ನವೀಸ್ ಮತ್ತು ಬಿಜೆಪಿ ರಾಜ್ಯ ಘಟಕದ ಮುಖ್ಯಸ್ಥ ಚಂದ್ರಶೇಖರ ಬಾವಂಕುಳೆ ಮತ್ತು ಇತರ ಹಿರಿಯ ನಾಯಕರು ಉಪಸ್ಥಿತರಿದ್ದರು.

ಪ್ರಮುಖ ಸುದ್ದಿ :-   ಪಾಕಿಸ್ತಾನದ ಎಫ್ -16 ಯುದ್ಧ ವಿಮಾನ ಹೊಡೆದುರುಳಿಸಿದ ಭಾರತ

https://twitter.com/i/broadcasts/1MYGNonBwEwJw

ಬಿಜೆಪಿ ನೇತೃತ್ವದ ಎನ್‌ಡಿಎ ಮಹಾರಾಷ್ಟ್ರದಲ್ಲಿ 45 ಸ್ಥಾನಗಳನ್ನು ಗಳಿಸುವ ಗುರಿ ಇಟ್ಟುಕೊಂಡಿತ್ತು, ಆದರೆ ಗಮನಾರ್ಹವಾಗಿ ಹಿಂದೆ ಬಿದ್ದಿದೆ.ಬಿಜೆಪಿ ರಾಜ್ಯದಲ್ಲಿ ಕೇವಲ ಒಂಬತ್ತು ಲೋಕಸಭಾ ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. 2019 ರ ಲೋಕಸಭೆ ಚುನಾವಣೆಗೆ ಹೋಲಿಸಿದರೆ ಪಕ್ಷದ ಸಂಖ್ಯೆ 14 ರಷ್ಟು ಕಡಿಮೆಯಾಗಿದೆ. ಅದರ ಮಿತ್ರಪಕ್ಷಗಳಾದ ಏಕನಾಥ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಜೊತೆಗೆ ಎನ್‌ಡಿಎ 48 ಸ್ಥಾನಗಳಲ್ಲಿ 17 ಸ್ಥಾನಗಳನ್ನು ಗೆದ್ದಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿ 23 ಸ್ಥಾನಗಳನ್ನು ಗೆದ್ದಿತ್ತು.
ಮತ್ತೊಂದೆಡೆ, ಪ್ರತಿಪಕ್ಷ ಮಹಾ ವಿಕಾಸ್ ಅಘಾಡಿ (ಎಂವಿಎ) 30 ಸ್ಥಾನಗಳನ್ನು ಗೆದ್ದಿದೆ. ಕಾಂಗ್ರೆಸ್ 13 ಸ್ಥಾನಗಳನ್ನು ಗೆದ್ದಿದೆ. 2019 ರಲ್ಲಿ ರಾಜ್ಯದಲ್ಲಿ ಗೆದ್ದ ಏಕಾಂಗಿ ಸ್ಥಾನದಿಂದ ಭಾರಿ ಜಿಗಿತವನ್ನು ಸಾಧಿಸಿದರೆ, ಶಿವಸೇನೆ (ಯುಬಿಟಿ) ಒಂಬತ್ತು ಮತ್ತು ಎನ್‌ಸಿಪಿ (ಶರದ್‌ ಪವಾರ್) ಎಂಟು ಸ್ಥಾನಗಳನ್ನು ಗಳಿಸಿತು.

ಪ್ರಮುಖ ಸುದ್ದಿ :-   15 ನಗರಗಳ ಮೇಲೆ ಗುರಿಯಿಟ್ಟಿದ್ದ ಪಾಕ್ ಡ್ರೋನ್‌ಗಳು- ಕ್ಷಿಪಣಿಗಳನ್ನು ಹೊಡೆದುರುಳಿಸಿದ ಭಾರತ, ಪಾಕಿಸ್ತಾನದ ವಾಯು ರಕ್ಷಣಾ ವ್ಯವಸ್ಥೆ ನಾಶ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement