ಬಿಜೆಪಿ ವಿರುದ್ಧ ಸುಳ್ಳು ಜಾಹೀರಾತು​ ಆರೋಪ; ರಾಹುಲ್​ ಗಾಂಧಿಗೆ ಜಾಮೀನು

ಬೆಂಗಳೂರು: 2022ರಲ್ಲಿ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್​ ಆರೋಪ ಮಾಡಿ ಜಾಹೀರಾತು ಪ್ರಕಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಕಳೆದ ವರ್ಷ ವಿಧಾನಸಭಾ ಚುನಾವಣೆಯ ಮುನ್ನ ಜಾಹೀರಾತಿನಲ್ಲಿ ರಾಜ್ಯದ ಬಿಜೆಪಿ ಸರ್ಕಾರವು ತನ್ನ 2019-2023 ರ ಆಡಳಿತದಲ್ಲಿ ಎಲ್ಲ ಸಾರ್ವಜನಿಕ ಕೆಲಸ ಕಾರ್ಯಗಳಿಗೆ ಶೇ.40ರಷ್ಟು ಕಮಿಷನ್ ವಸೂಲಿ ಮಾಡಲಾಗಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್, ಜಾಹೀರಾತಿನಲ್ಲಿ ಹಿಂದಿನ ಸರ್ಕಾರದ ಗುರಿಯಾಗಿಸಿಕೊಂಡು ‘ಭ್ರಷ್ಟಾಚಾರ ದರ ಕಾರ್ಡ್‌’ ಬಿಡುಗಡೆ ಮಾಡಿತ್ತು.
ರಾಹುಲ ಗಾಂಧಿ, ಸಿದ್ದರಾಮಯ್ಯ ಹಾಗೂ ಡಿ,ಕೆ ಶಿವಕುಮಾರ ಸೇರಿದಂತೆ ಕಾಂಗ್ರೆಸ್ ನಾಯಕರು ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ತಮ್ಮ ಪಕ್ಷದ ನಾಯಕರ ವಿರುದ್ಧ ಸುಳ್ಳು ಜಾಹೀರಾತು ಹಾಕಿದ್ದಾರೆ ಎಂದು ಆರೋಪಿಸಿ ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಕೇಶವ ಪ್ರಸಾಸ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ನ್ಯಾಯಾಲಯದ ಮುಂದೆ ಜೂನ್ 1 ರಂದು ಹಾಜರಾದ ನಂತರ ನ್ಯಾಯಾಲಯವು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯ ಕಾಂಗ್ರೆಸ್ ಮುಖ್ಯಸ್ಥರೂ ಆಗಿರುವ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಜಾಮೀನು ನೀಡಿದೆ.
ಜಾಹೀರಾತಿನ ಪ್ರಕಟಣೆಯಲ್ಲಿ ರಾಹುಲ್ ಭಾಗಿಯಾಗಿಲ್ಲ ಎಂದು ಕಾಂಗ್ರೆಸ್ ಹೇಳಿಕೆ ನೀಡಿದ್ದರೂ, ಜೂನ್ 1 ರಂದು ಹಾಜರಾಗದ ಕಾರಣ ರಾಹುಲ್ ಗಾಂಧಿ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸುವಂತೆ ಕರ್ನಾಟಕ ಬಿಜೆಪಿ ಘಟಕ ನ್ಯಾಯಾಲಯವನ್ನು ಕೋರಿತ್ತು.
ಆದರೆ, ಜೂನ್ 7 ರಂದು ಬೆಂಗಳೂರು ನ್ಯಾಯಾಲಯಕ್ಕೆ ತಪ್ಪದೇ ಹಾಜರಾಗುವಂತೆ ನ್ಯಾಯಾಧೀಶರು ಸೂಚಿಸಿದ್ದರು. ವಾದ-ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶರು ಷರತ್ತು ಬದ್ದ ಜಾಮೀನು ಮಂಜೂರು ಮಾಡಿ ವಿಚಾರಣೆಯನ್ನು ಜೂನ್​ 30ಕ್ಕೆ ಮುಂದೂಡಿದರು. ರಾಹುಲ್ ಗಾಂಧಿಗೆ ಮಾಜಿ ಸಂಸದ ಡಿ‌.ಕೆ ಸುರೇಶ್ ಬಾಂಡ್ ಶ್ಯೂರಿಟಿ ನೀಡಿದ್ದಾರೆ.

ಪ್ರಮುಖ ಸುದ್ದಿ :-   ಬೆಳಗಾವಿ | ಮಸೀದಿಯಲ್ಲಿದ್ದ ಕುರಾನ್ ಕದ್ದೊಯ್ದು ಸುಟ್ಟು ಹಾಕಿದ ಕಿಡಿಗೇಡಿಗಳು ; ಪ್ರತಿಭಟನೆ

1 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement