ಜನರಿಗೆ ಕಾಂಗ್ರೆಸ್ಸಿನ ಗ್ಯಾರಂಟಿ ಇಷ್ಟವಾಗಿಲ್ಲ, ಸಾಮೂಹಿಕವಾಗಿ ಎಲ್ಲರಿಗೂ ʼಗ್ಯಾರಂಟಿʼ ಕೊಡುವುದನ್ನು ನಿಲ್ಲಿಸವುದೇ ಒಳಿತು : ಕಾಂಗ್ರೆಸ್‌ ಮುಖಂಡ

ಮೈಸೂರು: ಜನರಿಗೆ ಕಾಂಗ್ರೆಸ್ ಗ್ಯಾರಂಟಿ ಇಷ್ಟ ಆಗಿಲ್ಲ. ಜನರು ಅದನ್ನು ಮತದಾನದ ಮೂಲಕ ತೋರಿಸಿದ್ದಾರೆ. ಹೀಗಾಗಿ ಸಾಮೂಹಿಕವಾಗಿ ಗ್ಯಾರಂಟಿ ಯೋಜನೆ (Guarantee Scheme) ಜಾರಿ ಮಾಡಿದ್ದನ್ನು ನಿಲ್ಲಿಸುವುದು ಒಳ್ಳಯದು. ಹೀಗಾಗಿ ಈ ಯೋಜನೆಯ ಬಗ್ಗೆ ಮುಖ್ಯಮಂತ್ರಿಗಳು ಮರುಪರಿಶೀಲನೆ ಮಾಡುವುದು ಒಳ್ಳೆಯದು ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ ಹೇಳಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಮ್ಮ ಗ್ಯಾರಂಟಿ ವಿರುದ್ಧ ಮಾತಾನಾಡುತ್ತಿತ್ತು. ಜನರು ಬಿಜೆಪಿ ಹೇಳಿದ್ದನ್ನೇ ಬೆಂಬಲಿಸಿದ್ದಾರೆ. ಇದರಿಂದಾಗಿ ಇದು ಜನರಿಗೆ ನಮ್ಮ ಗ್ಯಾರಂಟಿ ಇಷ್ಟ ಆಗಿಲ್ಲ ಅಂತ ಆಗುತ್ತದೆಯಲ್ಲವೇ ಎಂದು ಪ್ರಶ್ನಿಸಿದರು.

ಗ್ಯಾರಂಟಿ ಯೋಜನೆ ಬಗ್ಗೆ ಮುಖ್ಯಮಂತ್ರಿಗಳು ಈಗ ಮರು ಪರಿಶೀಲನೆ ಮಾಡಬೇಕು. 70% ರಷ್ಟು ಮೇಲ್ವರ್ಗದವರು ಈ ಯೋಜನೆ ಫಲಾನುಭವಿಗಳಾಗಿದ್ದಾರೆ. ಆದರೆ ಅದನ್ನು ಜನರು ತಿರಸ್ಕಾರಿಸಿದ್ದಾರೆ ಎಂದರು.
25,000 ಸಾವಿರ ಸಂಬಳ ಪಡೆಯುವ ವ್ಯಕ್ತಿಗೂ 25 ಲಕ್ಷ ಕಾರು ಹೊಂದಿರುವವರಿಗೂ ಪುಕ್ಕಟೆ ಕರೆಂಟ್ ಕೊಟ್ಟರೆ ಹೇಗೆ? ಈಗಲೂ ಗ್ಯಾರಂಟಿ ಹಣದಿಂದಲೇ ಜೀವನ ನಡೆಸುವ ಜನ ಇದ್ದಾರೆ. ಅಂತಹವರನ್ನು ನೋಡಿ ಗ್ಯಾರಂಟಿ ಮರು ಪರಿಶೀಲನೆ ಮಾಡಬೇಕಿದೆ ಎಂದು ಹೇಳಿದ್ದಾರೆ.
ಈಗಾಗಲೇ ಜಾರಿಯಾಗಿರುವ ಉಚಿತ ಗ್ಯಾರೆಂಟಿ ಯೋಜನೆಗಳನ್ನು ನಿಜವಾಗಿ ಅವಶ್ಯಕತೆ ಇದ್ದವರಿಗೆ ನೀಡಲಿ. ಆದರೆ ಉಳ್ಳವರಿಗೆ ಇದನ್ನು ನಿಲ್ಲಿಸುವ ಬಗ್ಗೆ ಮುಖ್ಯಮಂತ್ರಿಗಳು ಮರುಪರೀಶಲನೆ ಮಾಡಬೇಕು ಎಂದು ಮನವಿ ಮಾಡಿದರು.

ಪ್ರಮುಖ ಸುದ್ದಿ :-   ಸಿಡಿಲು ಬಡಿದು ಒಂದೇ ಕುಟುಂಬದ ಇಬ್ಬರು ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement