ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನಾಲ್ಕೈದು ದಿನ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಚುರುಕಾಗಿದ್ದು, ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳು ಮತ್ತು ಉತ್ತರ ಒಳನಾಡಿನಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಗುಡುಗು-ಮಿಂಚು ಬಿರುಗಾಳಿ ಸಹಿತ ಬಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಈ ಮಳೆ ಮುಂದಿನ 5 ದಿನಗಳ ಕಾಲ ಮುಂದುವರಿಯಲಿದೆ ಎಂದು ಮುನ್ಸೂಚನೆ ನೀಡಿದೆ.

ಜೂನ್ 9 ರಿಂದ 12 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತೆ ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಜೂನ್‌ 9ರಂದು ಭಾರೀ ಮಳೆ ಹಿನ್ನೆಲೆ ಕರಾವಳಿ ಕರ್ನಾಟಕದ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್‌ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮತ್ತೊಂದೆಡೆ ಮೇ 9ರಂದು ಉತ್ತರ ಕರ್ನಾಟಕದ ಧಾರವಾಡ ಜಿಲ್ಲೆಗೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಪ್ರಮುಖ ಸುದ್ದಿ :-   ವಾಹನಗಳಿಗೆ ಹೆಚ್‌ಎಸ್‌ಆರ್‌ಪಿ ಅಳವಡಿಕೆಗೆ ಗಡುವು ವಿಸ್ತರಣೆ : ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

 

 

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement