ನನ್ನ 18 ವರ್ಷದ ಸಾರ್ವಜನಿಕ ಸೇವೆ ಈ ರೀತಿ ಅಂತ್ಯವಾಗ್ತದೆ ಎಂದು ನಿರೀಕ್ಷಿಸಿರಲಿಲ್ಲ: ಮಾಜಿ ಸಚಿವ ರಾಜೀವ ಚಂದ್ರಶೇಖರ

ತಿರುವನಂತಪುರಂ : ತಮ್ಮ 18 ವರ್ಷಗಳ ಸುದೀರ್ಘ ಸಾರ್ವಜನಿಕ ಸೇವೆ ಅಂತ್ಯಗೊಂಡಿದೆ ಎಂದು ಕೇಂದ್ರದ ಮಾಜಿ ರಾಜ್ಯ ಸಚಿವ ರಾಜೀವ ಚಂದ್ರಶೇಖರ ಭಾನುವಾರ ಹೇಳಿದ್ದಾರೆ.
ಕಳೆದ ಮೋದಿ ಸರ್ಕಾರದಲ್ಲಿ ಮಾಹಿತಿ ತಂತ್ರಜ್ಞಾನ, ಎಲೆಕ್ಟ್ರಾನಿಕ್ಸ್, ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಮತ್ತು ಜಲಶಕ್ತಿ ಖಾತೆಯ ರಾಜ್ಯ ಸಚಿವರಾಗಿದ್ದ ರಾಜೀವ ಚಂದ್ರಶೇಖರ ಅವರು 2024 ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸಂಸದ ಶಶಿ ತರೂರ್ ವಿರುದ್ಧ ತಿರುವನಂತಪುರಂ ಲೋಕಸಭಾ ಕ್ಷೇತ್ರದಲ್ಲಿ ಬಹಳ ಕಡಿಮೆ ಅಂತರದಿಂದ ಸೋತರು. .
ಸೋಶಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಅವರು, ಚುನಾವಣೆಯಲ್ಲಿ ಸೋತ ಅಭ್ಯರ್ಥಿಯಾಗಿ ತಮ್ಮ 18 ವರ್ಷಗಳ ಸಾರ್ವಜನಿಕ ಸೇವೆಯನ್ನು ಕೊನೆಗೊಳಿಸುವ ಉದ್ದೇಶವನ್ನು ಎಂದಿಗೂ ಹೊಂದಿರಲಿಲ್ಲ ಎಂದು ಹೇಳಿದರು. ಪ್ರಧಾನಿ ಮೋದಿಯವರೊಂದಿಗೆ ಮೂರು ವರ್ಷಗಳ ಕಾಲ ಸೇವೆ ಸಲ್ಲಿಸುವ ಭಾಗ್ಯ ನನಗೆ ಸಿಕ್ಕಿದೆ ಎಂದೂ ಅವರು ಹೇಳಿದ್ದಾರೆ.

ಸಾರ್ವಜನಿಕ ಸೇವೆಯಲ್ಲಿ ನನ್ನ 18 ವರ್ಷಗಳ ಅವಧಿಗೆ ಇಂದು ತೆರೆ ಬಿದ್ದಿದೆ, ಅದರಲ್ಲಿ ಮೂರು ವರ್ಷಗಳು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಸೇವೆ ಸಲ್ಲಿಸಲು ನನಗೆ ಅವಕಾಶ ಸಿಕ್ಕಿತು. ಆದರೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿಯಾಗಿ ನನ್ನ 18 ವರ್ಷಗಳ ಸಾರ್ವಜನಿಕ ಸೇವೆಯನ್ನು ಕೊನೆಗೊಳಿಸಲು ನಾನು ಖಂಡಿತವಾಗಿಯೂ ಉದ್ದೇಶಿಸಿರಲಿಲ್ಲ, ಆದರೆ ಅದು ನಡೆದಿದೆ ” ಎಂದು ಅವರು ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಬಿಜೆಪಿಯ ಭರ್ತೃಹರಿ ಮಹತಾಬ್ ಲೋಕಸಭೆಯ ಹಂಗಾಮಿ ಸ್ಪೀಕರ್

ರಾಜೀವ ಚಂದ್ರಶೇಖರ ಅವರು ಭೇಟಿಯಾದ ಮತ್ತು ತಮ್ಮನ್ನು ಬೆಂಬಲಿಸಿದವರಿಗೆ, ವಿಶೇಷವಾಗಿ ತನಗೆ ಸ್ಫೂರ್ತಿ ಹಾಗೂ ಶಕ್ತಿ ತುಂಬಿದ ಕಾರ್ಯಕರ್ತರು ಮತ್ತು ನಾಯಕರಿಗೆ ಧನ್ಯವಾದ ಸಲ್ಲಿಸಿದ್ದಾರೆ.
“ಕಳೆದ ಮೂರು ವರ್ಷಗಳಿಂದ ಸರ್ಕಾರದಲ್ಲಿರುವ ನನ್ನ ಸಹೋದ್ಯೋಗಿಗಳಿಗೂ ಧನ್ಯವಾದಗಳು. ಬಿಜೆಪಿ ಕಾರ್ಯಕರ್ತನಾಗಿ, ನಾನು ಪಕ್ಷಕ್ಕೆ ಬೆಂಬಲ ಮತ್ತು ಕೆಲಸ ಮಾಡುವುದನ್ನು ಮುಂದುವರಿಸುತ್ತೇನೆ” ಎಂದು ಅವರು X ನಲ್ಲಿ ಹೇಳಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement