ಮೈಸೂರು : ಅನ್ನದಾನೇಶ್ವರ ಮಠದ ಸ್ವಾಮೀಜಿಯ ಬರ್ಬರ ಹತ್ಯೆ

ಮೈಸೂರು: ನಗರದ ಅನ್ನದಾನೇಶ್ವರ ಮಠದ ಶಿವಾನಂದ ಸ್ವಾಮೀಜಿ ಅವರನ್ನು ಮಾರಕಾಸ್ತ್ರಗಳಿಂದ ಭೀಕರವಾಗಿ ಕೊಲೆ ಮಾಡಿದ ಘಟನೆ ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಮೈಸೂರಿನ ಸಿದ್ದಾರ್ಥ ನಗರದಲ್ಲಿರುವ ಅನ್ನದಾನೇಶ್ವರ ಮಠದ ಶಿವಾನಂದ ಸ್ವಾಮೀಜಿ( 90 ) ಅವರನ್ನು ಮಠದ ಅವರ ಕೋನೆಯಲ್ಲಿಯೇ ಮಾರಕಾಸ್ತ್ರಗಳಿಂದ ಇರಿದು ಕೊಲೆ ಮಾಡಲಾಗಿದೆ.
ಸ್ವಾಮೀಜಿ ಹತ್ಯೆ ಮಾಡಿದ ಆರೋಪದಡಿ ಸ್ವಾಮೀಜಿ ಅವರ ಭದ್ರತಾ ಸಿಬ್ಬಂದಿ ಸಹಾಯಕನಾಗಿದ್ದ ರವಿ(60) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಹೇಳಲಾಗಿದೆ.

ಈ ಕೊಲೆ ಯಾವ ಕಾರಣಕ್ಕಾಗಿ ನಡೆದಿದೆ ಎಂಬುದು ಗೊತ್ತಿಲ್ಲ. ಆದರೆ ಆಸ್ತಿ ವಿಚಾರದಲ್ಲಿ ಇದ್ದ ಭಿನ್ನಾಭಿಪ್ರಾಯದಿಂದ ಈ ಕೃತ್ಯ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಕುಡಿದ ನಶೆಯಲ್ಲಿದ್ದ ಆರೋಪಿ ಕೊಲೆಯ ನಂತರ ವಿಷಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಹೇಳಲಾಗಿದೆ. ಆರೋಪಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ನಜರ್​​ಬಾದ್ ಠಾಣೆ ಪೊಲೀಸರು, ಬೆರಳಚ್ಚು ತಜ್ಞರು ಹಾಗೂ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ.
ಶಿವಾನಂದ ಸ್ವಾಮೀಜಿಗಳು ಸಂಸ್ಕೃತ ಪಾಠ ಶಾಲೆಯ ನಿವೃತ್ತ ಉಪನ್ಯಾಸಕರಾಗಿದ್ದರು. ಸಿದ್ಧಾರ್ಥ ನಗರದ ಬಳಿ ಅನ್ನದಾನೇಶ್ವರ ಮಠ ಸ್ಥಾಪಿಸಿ, ಬಡ ಮಕ್ಕಳಿಗೆ ಸಹಾಯ ಮಾಡುತ್ತಿದ್ದರು. ಮಠದ ಮೇಲೆ ಕೆಲವು ರಿಯಲ್ ಎಸ್ಟೇಟ್ ವ್ಯಕ್ತಿಗಳ ಕಣ್ಣು ಬಿದ್ದಿತ್ತು. ಜೊತೆಗೆ ಮಠದ ಪಕ್ಕದಲ್ಲೇ ಸರ್ಕಾರಿ ಕೆರೆ ಇದ್ದು, ಅದರ ಉಳಿವಿಗಾಗಿ ಸ್ವಾಮೀಜಿ ಹೋರಾಟ ಮಾಡುತ್ತಿದ್ದರು. ಈ ಹಿನ್ನೆಲೆಯಲ್ಲೂ ಪೊಲೀಸರು ತನಿಖೆ ನಡೆಸಬೇಕೆಂದು ಭಕ್ತರು ಆಗ್ರಹಿಸಿದ್ದಾರೆ.

ಪ್ರಮುಖ ಸುದ್ದಿ :-   19 ಸಾಧಕರಿಗೆ 2024-25ನೇ ಸಾಲಿನ ವಿವಿಧ ಪ್ರಶಸ್ತಿ ಪ್ರಕಟಿಸಿದ ರಾಜ್ಯ ಸರ್ಕಾರ ; ವಿವೇಕ ರೈಗೆ ಪಂಪ ಪ್ರಶಸ್ತಿ, ಡಾ. ಗುಂಜಾಳಗೆ ಬಸವ ಪುರಸ್ಕಾರ

4.5 / 5. 4

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement