ಪ್ರಜ್ವಲ್‌ ರೇವಣ್ಣ ಪ್ರಕರಣ: ಹೆಚ್ಚುವರಿ ಎಸ್‌ಪಿಪಿ ಹುದ್ದೆಗೆ ಹಿರಿಯ ವಕೀಲೆ ಜಯ್ನಾ ಕೊಠಾರಿ ರಾಜೀನಾಮೆ

ಬೆಂಗಳೂರು : ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣ ಹಾಗೂ ಈ ಸಂಬಂಧ ವಿಶೇಷ ತನಿಖಾ ದಳವು (ಎಸ್‌ಐಟಿ) ನಡೆಸುತ್ತಿರುವ ಪ್ರಕರಣಗಳಲ್ಲಿ ರಾಜ್ಯ ಸರ್ಕಾರದ ಪರವಾಗಿ ವಾದಿಸಲು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರಾಗಿ ನೇಮಕವಾಗಿದ್ದ ಹಿರಿಯ ವಕೀಲೆ ಜಯ್ನಾ ಕೊಠಾರಿ ತಮ್ಮ ಹುದ್ದೆಗೆ ಮಂಗಳವಾರ ರಾಜೀನಾಮೆ ಸಲ್ಲಿಸಿದ್ದಾರೆ.
ಗೃಹ ಇಲಾಖೆಯ ಉಪಕಾರ್ಯದರ್ಶಿಗೆ ಜಯನಾ ಕೊಠಾರಿ ತಮ್ಮ ರಾಜೀನಾಮೆ ಪತ್ರ ರವಾನೆ ಮಾಡಿದ್ದಾರೆ. ಹೊಳೆನರಸೀಪುರ ಟೌನ್‌ ಠಾಣೆಯಲ್ಲಿ ಜೆಡಿಎಸ್‌ ಶಾಸಕ ಎಚ್‌ ಡಿ ರೇವಣ್ಣ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣ, ಅದೇ ಠಾಣೆಯಲ್ಲಿ ಪ್ರಜ್ವಲ್‌ ವಿರುದ್ಧದ ಅತ್ಯಾಚಾರ ಪ್ರಕರಣ, ಮೈಸೂರಿನ ಕೆ ಆರ್‌ ನಗರ ಠಾಣೆಯಲ್ಲಿ ರೇವಣ್ಣ ಸೇರಿ ಹಲವರ ವಿರುದ್ಧ ದಾಖಲಾಗಿರುವ ಸಂತ್ರಸ್ತೆ ಅಪಹರಣ ಪ್ರಕರಣ, ಬೆಂಗಳೂರಿನ ಸಿಐಡಿ ಠಾಣೆಯಲ್ಲಿ ಪ್ರಜ್ವಲ್‌ ವಿರುದ್ಧ ದಾಖಲಾಗಿರುವ ಎರಡು ಪ್ರಕರಣಗಳಲ್ಲಿ ಹೈಕೋರ್ಟ್‌ನಲ್ಲಿ ಎಸ್‌ಐಟಿ ಪರವಾಗಿ ವಾದಿಸಲು ಜಯ್ನಾ ಕೊಠಾರಿ ಅವರನ್ನು ಹೆಚ್ಚುವರಿ ಎಸ್‌ಪಿಪಿಯಾಗಿ ರಾಜ್ಯ ಸರ್ಕಾರ ನೇಮಿಸಿತ್ತು.
ಇತ್ತೀಚೆಗಷ್ಟೇ ಇದೇ ಪ್ರಕರಣಕ್ಕೆ ರಾಜ್ಯ ಸರ್ಕಾರ ನೇಮಿಸಿದ್ದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಬಿ.ಎನ್. ಜಗದೀಶ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಜಾಯ್ನಾ ಕೊಠಾರಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಪ್ರಮುಖ ಸುದ್ದಿ :-   ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ ಸೇರಿ ನಾಲ್ವರು ಮತ್ತೆ ಪೊಲೀಸ್‌ ಕಸ್ಟಡಿಗೆ ; ಪವಿತ್ರಾಗೆ ನ್ಯಾಯಾಂಗ ಬಂಧನ

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement