ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಬಂಧನ: ತನಿಖೆ ಆಗುವವರೆಗೂ ಏನೂ ಹೇಳಲು ಸಾಧ್ಯವಿಲ್ಲ ಎಂದ ಗೃಹ ಸಚಿವರು

ಬೆಂಗಳೂರು : ನಗರದಲ್ಲಿ ನಡೆದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್ ಅವರನ್ನು ಬಂಧಿಸಲಾಗಿದೆ. ಆರೋಪಿಗಳನ್ನು ವಿಚಾರಣೆ ಮಾಡುವಾಗ ದರ್ಶನ್ ಹೆಸರು ಬಂದಿದೆ ಎಂಬ ಮಾಹಿತಿ ಇದೆ. ಅದರ ಮೇಲೆ ತನಿಖೆ ಆಗುವವರೆಗೂ ಏನೂ ಹೇಳಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದ್ದಾರೆ.
ರೇಣುಕಾಸ್ವಾಮಿ ಕೊಲೆ ಯಾವ ಕಾರಣಕ್ಕೆ ನಡೆದಿದೆ. ಇದರಲ್ಲಿ ದರ್ಶನ್ ನೇರವಾಗಿ ಭಾಗಿಯಾಗಿದ್ದಾರೆಯೋ? ಇಲ್ಲವೂ? ದರ್ಶನ್ ಹೆಸರು ಯಾಕೆ ಬಂದಿದೆ ಎನ್ನುವುದು ತನಿಖೆ ನಂತರ ಗೊತ್ತಾಗಲಿದೆ. ಸದ್ಯ ಬೇರೆ ಈ ಬಗ್ಗೆ ಏನೂ ಹೇಳಲು ಸಾಧ್ಯವಿಲ್ಲ. ತನಿಖೆ ನಂತರ ಎಲ್ಲವೂ ಗೊತ್ತಾಗಲಿದೆ ಎಂದು ತಿಳಿಸಿದರು.
ಸಾಮಾಜಿಕ ಜಾಲತಾಣದಲ್ಲಿ ಏನು ಕಾಮೆಂಟ್‌ ಮಾಡಲಾಗಿತ್ತು ಎಂಬ ಬಗ್ಗೆ ಗೊತ್ತಿಲ್ಲ. ಮೈಸೂರಿನಲ್ಲಿ ನಟ ದರ್ಶನ್‌ ಬಂಧನ ಆಗಿದೆ. ಪೊಲೀಸರು ನಟ ದರ್ಶನ್ ಅವರನ್ನು ಮೈಸೂರಿನಿಂದ ಬೆಂಗಳೂರಿಗೆ ಕರೆದುಕೊಂಡು ಬಂದಿದ್ದಾರೆ. ಇದಕ್ಕಿಂತ ಹೆಚ್ಚಿಗೆ ಹೇಳಲು ಸಾಧ್ಯವಿಲ್ಲ ಎಂದು ಹೇಳಿದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement