ಕುವೈತ್‌ ಕಟ್ಟಡದಲ್ಲಿ ಅಗ್ನಿ ಅವಘಡ ; ಭಾರತೀಯರು ಸೇರಿ 41 ಮಂದಿ ಸಾವು

ಕುವೈತ್ : ದಕ್ಷಿಣ ಕುವೈತ್‌ನ ಮಂಗಾಫ್ ನಗರದಲ್ಲಿ ಕಟ್ಟಡದಲ್ಲಿ ಕಾಣಿಸಿಕೊಂಡ ಬೆಂಕಿ ಅನಾಹುತದಲ್ಲಿ ಕನಿಷ್ಠ 41 ಜನರು ಸಾವಿಗೀಡಾಗಿದ್ದಾರೆ ಎಂದು ದೇಶದ ಸರ್ಕಾರಿ ಮಾಧ್ಯಮವು ಬುಧವಾರ ವರದಿ ಮಾಡಿದೆ. ವರದಿಗಳ ಪ್ರಕಾರ, ದುರಂತ ಘಟನೆಯಲ್ಲಿ ಹಲವಾರು ಭಾರತೀಯರು ಸಹ ಮೃತಪಟ್ಟಿದ್ದಾರೆ. ಸ್ಥಳೀಯ ಮಾಧ್ಯಮಗಳು ಈ ಕಟ್ಟಡವು ಹೆಚ್ಚಿನ ಮಲಯಾಳಂ ಜನಸಂಖ್ಯೆಯನ್ನು ಹೊಂದಿದೆ ಎಂದು ವರದಿ ಮಾಡಿದೆ. ಆದಾಗ್ಯೂ, ಅಧಿಕಾರಿಗಳಿಂದ ಈ ಬಗ್ಗೆ ಅಧಿಕೃತ ದೃಢೀಕರಣ ಇನ್ನೂ ಬಂದಿಲ್ಲ.
ಕುವೈತ್ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ಗಂಭೀರ ಸ್ಥಿತಿಯಲ್ಲಿರುವ ಎಲ್ಲಾ ಗಾಯಾಳುಗಳನ್ನು ಅಗತ್ಯ ವೈದ್ಯಕೀಯ ಚಿಕಿತ್ಸೆಗಾಗಿ ಹತ್ತಿರದ ಹಲವಾರು ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ. ಕಟ್ಟಡದ ಬೆಂಕಿಯಲ್ಲಿ ಗಾಯಗೊಂಡವರಿಗೆ ಸೂಕ್ತ ವೈದ್ಯಕೀಯ ಆರೈಕೆ ನೀಡಲು ವೈದ್ಯಕೀಯ ತಂಡಗಳು ತಮ್ಮ ಕೈಲಾದಷ್ಟು ಪ್ರಯತ್ನಿಸುತ್ತಿವೆ ಎಂದು ಸಚಿವಾಲಯ ಹೇಳಿದೆ.

ಸ್ಥಳೀಯ ಕಾಲಮಾನ ಬೆಳಿಗ್ಗೆ 6 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ (ಸುಮಾರು 9 ಗಂಟೆಗೆ IST). ಬೆಂಕಿಯಿಂದಾಗಿ ಸುಮಾರು 43 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಅವರಲ್ಲಿ ನಾಲ್ವರು ಸಾವಿಗೀಡಾದ್ದಾರೆ ಎಂದು ಕುವೈತ್ ಆರೋಗ್ಯ ಸಚಿವಾಲಯ ತಿಳಿಸಿದೆ
ಬೆಂಕಿಯನ್ನು ಕಂಡು ಕೆಲವರು ತಪ್ಪಿಸಿಕೊಳ್ಳಲು ಅಪಾರ್ಟ್‌ಮೆಂಟ್‌ನಿಂದ ಹೊರಗೆ ಜಿಗಿದಿದ್ದರಿಂದ ಸಾವಿಗೀಡಾಗಿದ್ದಾರೆ. ಕೆಲವರು ಸುಟ್ಟಗಾಯಗಳಿಂದ ಮತ್ತು ದಟ್ಟವಾದ ಹೊಗೆಯಿಂದ ಉಸಿರಾಡಲು ಸಾಧ್ಯವಾಗದೆ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

ಪ್ರಮುಖ ಸುದ್ದಿ :-   ವೀಡಿಯೊ..| ಭಾರತದ ಜೊತೆ ಸಂಘರ್ಷದಿಂದ ಪಾಕಿಸ್ತಾನಕ್ಕೆ ದೊಡ್ಡ ಶಾಕ್‌ : ತಮ್ಮದು ಸ್ವತಂತ್ರ ದೇಶ ಎಂದು ಘೋಷಿಸಿಕೊಂಡ ಬಲೂಚಿಸ್ತಾನ ಪ್ರಾಂತ್ಯ...!

“ಬೆಂಕಿ ಅವಘಡ ಸಂಭವಿಸಿದ ಕಟ್ಟಡದಲ್ಲಿ ಕಾರ್ಮಿಕರು ವಾಸಿಸುತ್ತಿದ್ದರು. ಮತ್ತು ಅಲ್ಲಿ ಅನೇಕ ಕೆಲಸಗಾರರು ಇದ್ದರು. ಡಜನ್‌ಗಟ್ಟಲೆ ಜನರನ್ನು ರಕ್ಷಿಸಲಾಯಿತು, ಆದರೆ ದುರದೃಷ್ಟವಶಾತ್, ಬೆಂಕಿಯಿಂದ ಹೊಗೆಯನ್ನು ಉಸಿರಾಡುವ ಪರಿಣಾಮವಾಗಿ ಅನೇಕ ಸಾವುಗಳು ಸಂಭವಿಸಿವೆ” ಎಂದು ಹಿರಿಯ ಪೊಲೀಸ್‌ ಅಧಿಕಾರಿಯನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement