ನಟ ದರ್ಶನ್ ಸೇರಿ 13 ಜನರ ಮೊಬೈಲ್ ಸೀಜ್ : ವರದಿ

 ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆಯನ್ನು ಕರ್ನಾಟಕ ಪೊಲೀಸರು ಚುರುಕುಗೊಳಿಸಿದ್ದಾರೆ. ಕನ್ನಡ ನಟ ದರ್ಶನ್ ಹಾಗೂ ಪ್ರಕರಣದಲ್ಲಿ ಬಂಧಿತರಾಗಿರುವ ಇತರ ಆರೋಪಿಗಳ ಫೋನ್‌ಗಳನ್ನು ಜಪ್ತಿ ಮಾಡಲಾಗಿದೆ ಎನ್ನಲಾಗಿದೆ.
ಜೂನ್ 8 ರಂದು ರೇಣುಕಾಸ್ವಾಮಿ ಅವರ ಮೃತದೇಹವನ್ನು ವಿಲೇವಾರಿ ಮಾಡಲು ನಟ ದರ್ಶನ್ ಮತ್ತು ಅವರ ಸಹಾಯಕರು ಬಳಸಿದ್ದಾರೆ ಎನ್ನಲಾದ ಜೀಪ್ ಅನ್ನು ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಈವರೆಗೆ ಎರಡನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.
ದರ್ಶನ್ ಅವರನ್ನು ಬೆಂಗಳೂರಿನ ಪೊಲೀಸರು ಮೈಸೂರಿನಿಂದ ಬಂಧಿಸಿದ ಒಂದು ದಿನದ ನಂತರ ಇದು ನಡೆದಿದೆ. ನಂತರ ಬೆಂಗಳೂರಿಗೆ ಕರೆತಂದು 6 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟನ ಕೈವಾಡದ ಬಗ್ಗೆ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ರೇಣುಕಾ ಸ್ವಾಮಿ ಅವರು ಜೂನ್ 8ರಂದು ಬೆಂಗಳೂರಿನ ಸುಮನಹಳ್ಳಿ ಸೇತುವೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರು ಚಿತ್ರದುರ್ಗದ ಅಪೋಲೋ ಫಾರ್ಮಸಿ ಶಾಖೆಯಲ್ಲಿ ಕೆಲಸ ಮಾಡುತ್ತಿದ್ದರು. ಮಾರಣಾಂತಿಕವಾಗಿ ಹಲ್ಲೆ ನಡೆಸಿದ ನಂತರ ಮೃತಪಟ್ಟ ರೇಣುಕಾಸ್ವಾಮಿ ಮೃತಪಟ್ಟಿದ್ದರು.
ಈ ಹಿಂದೆ, ರೇಣುಕಾ ಅವರು ದರ್ಶನ್ ಅವರ ಸ್ನೇಹಿತೆಯಾಗಿರುವ ಕನ್ನಡ ನಟಿ ಪವಿತ್ರಾ ಗೌಡರಿಗೆ ಅಸಭ್ಯ ಸಂದೇಶಗಳನ್ನು ಕಳುಹಿಸುತ್ತಿದ್ದರು ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಇದರಿಂದ ಸಿಟ್ಟಿಗೆದ್ದು ರೇಣುಕಾ ಸ್ವಾಮಿ ಕೊಲೆ ಮಾಡಲಾಗಿದೆ.
ಶೆಡ್‌ ನಲ್ಲಿ ಸ್ಥಳ ಮಹಜರು
ರೇಣುಕಾ ಸ್ವಾಮಿಯನ್ನು ಕೊಲೆಗೈದ ಪಟ್ಟಣಗೆರೆಯ ಶೆಡ್‌ ನಲ್ಲಿ ಪೊಲೀಸರು ಬುಧವಾರ ಸ್ಥಳ ಮಹಜರು ನಡೆಸಿದ್ದಾರೆ. ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇತರ ಆರೋಪಿಗಳನ್ನ ಕರೆತಂದು ಪೊಲೀಸ್ ಅಧಿಕಾರಿಗಳು ಹಾಗೂ ವಿಧಿವಿಜ್ಞಾನ ಪ್ರಯೋಗಾಲಯ ತಂಡ ಸುಮಾರು ಒಂದೂವರೆಗಂಟೆಗೂ ಹೆಚ್ಚು ಕಾಲ ಮಹಜರು ನಡೆಸಿದೆ ಹಗೂ ಸಾಕ್ಷ್ಯ ಸಂಗ್ರಹ ಮಾಡಿದ್ದಾರೆ ಎಂದು ಹೇಳಲಾಗಿದೆ.

ಪ್ರಮುಖ ಸುದ್ದಿ :-   ಏರ್ ಇಂಡಿಯಾ ವಿಮಾನದಲ್ಲಿ 7 ಮಂದಿ ಅಸ್ವಸ್ಥ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement