ಲೋಕಸಭೆ ಚುನಾವಣೆ ನಂತರದ ಮೊದಲ ಸಂಸತ್ ಅಧಿವೇಶನ ಜೂನ್ 24ರಿಂದ ಆರಂಭ

ನವದೆಹಲಿ : 18ನೇ ಲೋಕಸಭೆಯ ಮೊದಲ ಅಧಿವೇಶನ ಜೂನ್ 24 ರಂದು ಆರಂಭವಾಗಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ ರಿಜಿಜು ಬುಧವಾರ ತಿಳಿಸಿದ್ದಾರೆ.
ಅಧಿವೇಶನದ ಮೊದಲ ಮೂರು ದಿನಗಳಲ್ಲಿ ಹೊಸದಾಗಿ ಆಯ್ಕೆಯಾದ ಸಂಸದರು ಪ್ರಮಾಣ ವಚನ ಸ್ವೀಕರಿಸುತ್ತಾರೆ ಮತ್ತು ಸದನದ ಸ್ಪೀಕರ್ ಅನ್ನು ಆಯ್ಕೆ ಮಾಡುತ್ತಾರೆ. ಜುಲೈ 3ರಂದು ಅಧಿವೇಶನ ಮುಕ್ತಾಯವಾಗಲಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜೂನ್ 27 ರಂದು ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಮತ್ತು ಮುಂದಿನ ಐದು ವರ್ಷಗಳ ಹೊಸ ಸರ್ಕಾರದ ಮಾರ್ಗಸೂಚಿಯನ್ನು ರೂಪಿಸುವ ಸಾಧ್ಯತೆಯಿದೆ.

ರಾಜ್ಯಸಭೆಯ 264ನೇ ಅಧಿವೇಶನ ಕೂಡ ಜೂನ್ 27 ರಂದು ಆರಂಭವಾಗಿ ಜುಲೈ 3 ರಂದು ಮುಕ್ತಾಯವಾಗಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ ರಿಜಿಜು ತಿಳಿಸಿದ್ದಾರೆ. ಜೂನ್ 27 ರಂದು ರಾಷ್ಟ್ರಪತಿಗಳ ಭಾಷಣದ ನಂತರ ಪ್ರಧಾನಿ ಮೋದಿ ಅವರು ಸಂಸತ್ತಿಗೆ ತಮ್ಮ ಮಂತ್ರಿಮಂಡಲವನ್ನು ಪರಿಚಯಿಸುವ ನಿರೀಕ್ಷೆಯಿದೆ.
ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆ ನಡೆಯಲಿದ್ದು, ಸಂಸತ್ತಿನ ಉಭಯ ಸದನಗಳಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಪ್ರಧಾನಿ ಉತ್ತರ ನೀಡಲಿದ್ದಾರೆ.

ಪ್ರಮುಖ ಸುದ್ದಿ :-   ಪಾಕಿಸ್ತಾನದಿಂದ ಪರಮಾಣು ಬೆದರಿಕೆ ಇಲ್ಲ ; ಅಮೆರಿಕ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಿಲ್ಲ : ವಿದೇಶಾಂಗ ಕಾರ್ಯದರ್ಶಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement