
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬವರ ಭೀಕರ ಹತ್ಯೆ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ನಟ ದರ್ಶನ್, ಆತನ ಪ್ರೇಯಸಿ ಪವಿತ್ರಾ ಗೌಡ ಹಾಗೂ 11 ಮಂದಿ ಸಹಚರರನ್ನು ಬೆಂಗಳೂರು ಪೊಲೀಸರು ಮಂಗಳವಾರ ಬಂಧಿಸಿದ ಬೆನ್ನಲ್ಲೇ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ ಅವರು ಇನ್ಸ್ಟಾಗ್ರಾಮ್ ಫೋಟೋ ತೆಗೆದು ಹಾಕಿದ್ದಾರೆ.
ಅಲ್ಲದೆ ದರ್ಶನ್ ಅವರನ್ನು ಅನ್ ಫಾಲೋ ಮಾಡಿದ್ದಾರೆ.
ರೇಣುಕಾಸ್ವಾಮಿ ಪ್ರಕರಣದಲ್ಲಿ ಬಂಧಿನತಾಗಿರುವ ನಟ ದರ್ಶನ್, ಗೆಳತಿ ಪವಿತ್ರಾ ಗೌಡ ಸೇರಿದಂತೆ ಎಲ್ಲ ಆರೋಪಿಗಳನ್ನು ನ್ಯಾಯಾಲಯ ಪೊಲೀಸ್ ಕಸ್ಟಡಿಗೆ ನೀಡಿದೆ. ಎಲ್ಲ ಆರೋಪಿಗಳಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ಕಬ್ಬನ್ ಪಾರ್ಕ್ ಆವರಣದಲ್ಲಿರುವ ಎಸಿಎಂಎಂ ಕೋರ್ಟ್‌ಗೆ ಮಂಗಳವಾರ ಹಾಜರುಪಡಿಸಿದ ನಂತರ ಕೋರ್ಟ್ ಹೆಚ್ಚಿನ ವಿಚಾರಣೆಗಾಗಿ 6 ದಿನ ಪೊಲೀಸ್ ಕಸ್ಟಡಿಗೆ ನೀಡಿದೆ.
ದರ್ಶನ ಹಾಗೂ ಪವಿತ್ರಾ ಗೌಡ ವಿಚಾರದಲ್ಲಿ ವಿಜಯಲಕ್ಷ್ಮಿ ಅವರಿಗೆ ಬೇಸರವಾಗಿದೆ, ಈ ಬಗ್ಗೆ ಕೆಲತಿಂಗಳ ಹಿಂದೆ ಅವರು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದರು. ಈಗ ಇದೇ ಪವಿತ್ರ ಗೌಡ ಅವರಿಗಾಗಿ ದರ್ಶನ್ ಕೊಲೆ ಮಾಡಿದ ಎನ್ನುವ ಆರೋಪ ಹೊತ್ತಿದ್ದಾರೆ. ದರ್ಶನ್ ಬಂಧನದ ನಂತರ ಈವರೆಗೆ ಪತ್ನಿ ವಿಜಯಲಕ್ಷ್ಮೀ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.



ನಿಮ್ಮ ಕಾಮೆಂಟ್ ಬರೆಯಿರಿ