‘ಹಮಾರೆ ಬಾರಹ’ ಸಿನಿಮಾ ಬಿಡುಗಡೆಗೆ ಸುಪ್ರೀಂಕೋರ್ಟ್‌ ತಡೆ

ನವದೆಹಲಿ: ಹಮಾರೆ ಬಾರಹ’ ಚಿತ್ರದ ಬಿಡುಗಡೆಗೆ ಸುಪ್ರೀಂ ಕೋರ್ಟ್ ಗುರುವಾರ ತಡೆ ನೀಡಿದ್ದು ಇಸ್ಲಾಮ್‌ ನಂಬಿಕೆ ಮತ್ತು ವಿವಾಹಿತ ಮುಸ್ಲಿಂ ಮಹಿಳೆಯರನ್ನು ಅವಹೇಳನ ಮಾಡುತ್ತದೆ ಎಂದು ಆರೋಪಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ತ್ವರಿತ ನಿರ್ಧಾರ ತೆಗೆದುಕೊಳ್ಳುವಂತೆ ಬಾಂಬೆ ಹೈಕೋರ್ಟ್‌ಗೆ ಸೂಚಿಸಿದೆ.
ಚಲನಚಿತ್ರ ಪ್ರಮಾಣೀಕರಣ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ಇತ್ಯರ್ಥವಾಗುವವರೆಗೆ ಚಲನಚಿತ್ರ ಪ್ರದರ್ಶನ ಮಾಡುವಂತಿಲ್ಲ ಎಂದು ನ್ಯಾಯಮೂರ್ತಿಗಳಾದ ವಿಕ್ರಂನಾಥ ಮತ್ತು ಸಂದೀಪ ಮೆಹ್ತಾ ಅವರಿದ್ದ ಪೀಠ ಹೇಳಿದೆ.
ಜೂನ್‌ 14ರಂದು ಸಿನಿಮಾ ತೆರೆ ಕಾಣಬೇಕಿತ್ತು.

ಅರ್ಜಿಯನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಹೈಕೋರ್ಟ್‌ಗೆ ಸುಪ್ರೀಂಕೋರ್ಟ್‌ ನ್ಯಾಯಾಲಯ ಇದೇ ವೇಳೆ ಸೂಚಿಸಿದೆ. ಸಿನಿಮಾ ಬಿಡುಗಡೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಂತರ ನ್ಯಾಯಾಲಯ ಈ ಆದೇಶ ಮಾಡಿದೆ.
ಅರ್ಜಿದಾರರ ಪರ ವಕೀಲರಾದ ಫೌಜಿಯಾ ಶಕೀಲ್‌ ಅವರು, ಚಲನಚಿತ್ರ ಪ್ರದರ್ಶನಕ್ಕೆ ಸಮಿತಿಯನ್ನು ರಚಿಸುವಂತೆ ಹೈಕೋರ್ಟ್ ಪ್ರಕರಣದಲ್ಲಿ ಪಕ್ಷಕಾರನಾಗಿರುವ ಕೇಂದ್ರೀಯ ಚಲನಚಿತ್ರ ಪ್ರಮಾಣೀಕರಣ ಮಂಡಳಿಗೆ (ಸಿಬಿಎಫ್‌ಸಿ) ನಿರ್ದೇಶಿಸಿದೆ ಎಂದು ಹೇಳಿದರು.
ಆದರೆ, ಟೀಸರ್‌ಗಳಿಂದ ಎಲ್ಲಾ ಆಕ್ಷೇಪಾರ್ಹ ದೃಶ್ಯಗಳನ್ನು ತೆಗೆದುಹಾಕಲಾಗಿದೆ ಎಂದು ಚಲನಚಿತ್ರ ನಿರ್ಮಾಪಕರನ್ನು ಪ್ರತಿನಿಧಿಸಿದ್ದ ವಕೀಲರು ಹೇಳಿದರು. ಈ ವಾದ ಒಪ್ಪದ ನ್ಯಾಯಾಲಯ ” ನಾವು ಇಂದು ಬೆಳಿಗ್ಗೆ ಟೀಸರ್ ಅನ್ನು ನೋಡಿದ್ದೇವೆ ಮತ್ತು ಎಲ್ಲಾ ದೃಶ್ಯಗಳು ಇವೆ ” ಎಂದು ಅದು ಹೇಳಿತು.

ಪ್ರಮುಖ ಸುದ್ದಿ :-   ವೀಡಿಯೊಗಳು..| ಇರಾನಿನ 6 ವಾಯುನೆಲೆಗಳ ಮೇಲೆ ಇಸ್ರೇಲ್‌ ದಾಳಿ ; 15 ವಿಮಾನಗಳು ನಾಶ

 

5 / 5. 4

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement