ಯುಎಪಿಎ ಅಡಿ ಲೇಖಕಿ ಅರುಂಧತಿ ರಾಯ್ ವಿರುದ್ಧ ಕಾನೂನು ಕ್ರಮಕ್ಕೆ ಅನುಮತಿ ನೀಡಿದ ದೆಹಲಿ ಲೆಫ್ಟಿನೆಂಟ್

ನವದೆಹಲಿ: ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು 2010 ರಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪ್ರಚೋದನಕಾರಿ ಭಾಷಣಗಳನ್ನು ಮಾಡಿದ ಆರೋಪದಲ್ಲಿ ಲೇಖಕಿ ಅರುಂಧತಿ ರಾಯ್ ವಿರುದ್ಧ ಕಠಿಣ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ(Unlawful Activities (Prevention) Act)ಯಡಿಯಲ್ಲಿ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ (ಜೂನ್ 14) ತಿಳಿಸಿದ್ದಾರೆ.
ಅರುಂಧತಿ ರಾಯ್ ಮತ್ತು ಕಾಶ್ಮೀರದ ಕೇಂದ್ರೀಯ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಶೇಖ್ ಶೋಕತ್ ಹುಸೇನ್ ವಿರುದ್ಧ ಎಫ್‌ಐಆರ್ ಅನ್ನು ನವದೆಹಲಿಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶದ ನಂತರ ದಾಖಲಿಸಲಾಗಿದೆ. ಕಾಶ್ಮೀರದ ಸಾಮಾಜಿಕ ಕಾರ್ಯಕರ್ತ ಸುಶೀಲ ಪಂಡಿತ್ ಅವರು ಅಕ್ಟೋಬರ್ 28, 2010 ರಂದು ನೀಡಿದ ದೂರಿನ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.

ಯುಎಪಿಎ ಸೆಕ್ಷನ್ 45 (1) ಅಡಿಯಲ್ಲಿ ಕಾನೂನು ಕ್ರಮ
“ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಅರುಂಧತಿ ರಾಯ್ ಮತ್ತು ಕಾಶ್ಮೀರದ ಸೆಂಟ್ರಲ್ ಯೂನಿವರ್ಸಿಟಿಯ ಇಂಟರ್ನ್ಯಾಷನಲ್ ಲಾ ಮಾಜಿ ಪ್ರೊಫೆಸರ್ ಡಾ. ಶೇಖ್ ಶೋಕತ್ ಹುಸೇನ್ ಅವರ ಮೇಲಿನ ಪ್ರಕರಣದಲ್ಲಿ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ (UAPA) ಸೆಕ್ಷನ್ 45 (1) ಅಡಿಯಲ್ಲಿ ಪ್ರಾಸಿಕ್ಯೂಷನ್ ಅನ್ನು ಅನುಮೋದಿಸಿದ್ದಾರೆ.

ಪ್ರಮುಖ ಸುದ್ದಿ :-   ಭಾರತದ ಆಪರೇಷನ್ ಸಿಂಧೂರ ದಾಳಿಯಲ್ಲಿ ಈ ಐವರು ನೊಟೊರಿಯಸ್‌ ಭಯೋತ್ಪಾದಕರ ಹತ್ಯೆ ; ಆದ್ರೆ ಅಂತ್ಯಕ್ರಿಯೆ ವೇಳೆ ಸರ್ಕಾರಿ ಗೌರವ ನೀಡಿದ ಪಾಕ್‌..!

ಕಳೆದ ವರ್ಷ ಅಕ್ಟೋಬರ್‌ನಲ್ಲಿ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಮತ್ತು ಸಾರ್ವಜನಿಕ ತೊಂದರೆಗೆ ಕಾರಣವಾಗುವ ಹೇಳಿಕೆಗಳನ್ನು ನೀಡುವ ಅಪರಾಧಕ್ಕಾಗಿ ಈ ಇಬ್ಬರು ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲು ಲೆಫ್ಟಿನೆಂಟ್ ಗವರ್ನರ್ ಸಿಆರ್‌ಪಿಸಿಯ ಸೆಕ್ಷನ್ 196 ರ ಅಡಿಯಲ್ಲಿ ಅನುಮತಿ ನೀಡಿದ್ದರು..
ಅಕ್ಟೋಬರ್ 21, 2010 ರಂದು ನವದೆಹಲಿಯಲ್ಲಿಯ ಕೋಪರ್ನಿಕಸ್ ಮಾರ್ಗ್‌ನ ಎಲ್‌ಟಿಜಿ ಆಡಿಟೋರಿಯಂನಲ್ಲಿ “ಅಜೆದಿ – ದಿ ಓನ್ಲಿ ವೇ (Azedi – The Only Way)” ಬ್ಯಾನರ್ ಅಡಿಯಲ್ಲಿ ಆಯೋಜಿಸಲಾದ ಸಮ್ಮೇಳನದಲ್ಲಿ ರಾಯ್ ಮತ್ತು ಹುಸೇನ್ ಪ್ರಚೋದನಕಾರಿ ಭಾಷಣಗಳನ್ನು ಮಾಡಿದ್ದಾರೆ ಎಂಬ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು.

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement