ಕರ್ನಾಟಕದ ಈ ಜಿಲ್ಲೆಗಳಲ್ಲಿ 6 ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಆರು ದಿನಗಳ ಕಾಲ ಮುಂಗಾರು ಮತ್ತಷ್ಟು ಚುರುಕು ಪಡೆಯಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆ ನೀಡಿದೆ. ಹಾಗೂ ಕೆಲವು ಜಿಲ್ಲೆಗಳಲ್ಲಿ ಗಂಟೆಗೆ 40-50 kmp ವೇಗದಲ್ಲಿ ಗಾಳಿ ಬೀಸಬಹುದು ಎಂದು ಹೇಳಿದೆ.
ಜೂನ್‌ 15: : ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.  ಸಣ್ಣ ಮಳೆ/ಗುಡುಗು ಸಹಿತ ಗಾಳಿಯೊಂದಿಗೆ (40-50 kmph) ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಸಂಭವಿಸುವ ಸಾಧ್ಯತೆಯಿದೆ.
ಜೂನ್‌ 16 : ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. * ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಜೂನ್‌ 17 : ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೆ ಬೆಳಗಾವಿ, ಧಾರವಾಡ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಜೂನ್‌ 18 : ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೆ, ಒಳನಾಡಿನ ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಜೂನ್‌ 19 : ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಜುನ್‌ 20 : ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಪ್ರಮುಖ ಸುದ್ದಿ :-   ಕರ್ನಾಟಕದ ಹಲವು ಜಿಲೆಗಳಲ್ಲಿ ಅ.22ರ ವರೆಗೆ ಗುಡುಗು ಸಹಿತ ಮಳೆ ಮುನ್ಸೂಚನೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement