ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಬೆಂಗಳೂರು : ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಶುಕ್ರವಾರ (ಜೂನ್‌ ೧೪)ರಂದು ಬಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಕೊಪ್ಪಳ, ರಾಯಚೂರಿನಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.
ಅಲ್ಲದೆ, ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೀದರ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಬಳ್ಳಾರಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಕೂಡ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ.
ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35 ರಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ.

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement