ನವದೆಹಲಿ : ಶನಿವಾರ (ಜೂನ್ 15) ಛತ್ತೀಸ್‌ಗಢದ ಅಬುಜ್ಮದ್ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಕನಿಷ್ಠ ಎಂಟು ನಕ್ಸಲೀಯರು ಹತರಾಗಿದ್ದಾರೆ. ಹಾಗೂ ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ.
ನಾರಾಯಣಪುರ, ಕಂಕೇರ್, ದಾಂತೇವಾಡ ಮತ್ತು ಕೊಂಡಗಾಂವ್ ಎಂಬ ನಾಲ್ಕು ಜಿಲ್ಲೆಗಳ ಭದ್ರತಾ ಸಿಬ್ಬಂದಿಯ ಜಂಟಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಅಬುಜ್ಮದ್ ಅರಣ್ಯದಲ್ಲಿ ಶನಿವಾರ ಬೆಳಿಗ್ಗೆ ಗುಂಡಿನ ಚಕಮಕಿ ನಡೆಯಿತು, ಇಬ್ಬರು ಗಾಯಗೊಂಡಿದ್ದಾರೆ ಮತ್ತು ಒಬ್ಬ ಎಸ್‌ಟಿಎಫ್ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎಂದು ವರದಿ ಹೇಳಿದೆ.
ಗುಂಡುತಗುಲಿ ಯೋಧ ಸಾಮೃತಪಟ್ಟಿದ್ದಾರೆ. ಗಾಯಾಳುಗಳು ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಅಬುಜ್ಮದ್‌ನಲ್ಲಿನ ಎನ್‌ಕೌಂಟರ್ ಜೂನ್ 12 ರಂದು ಕುತುಲ್, ಫರಸ್ಬೇಡ ಮತ್ತು ಕೊಡ್ತಮೇಟಾ ಪ್ರದೇಶಗಳಲ್ಲಿ ಪ್ರಾರಂಭವಾಯಿತು.
ಏತನ್ಮಧ್ಯೆ, ಘಟನೆಯ ಕುರಿತು ಮಾತನಾಡಿದ ಪೊಲೀಸರು, .303 ರೈಫಲ್, ಬ್ಯಾರೆಲ್ ಗ್ರೆನೇಡ್ ಲಾಂಚರ್ (ಬಿಜಿಎಲ್) ಮತ್ತು ಇತರ ಶಸ್ತ್ರಾಸ್ತ್ರಗಳು ಮತ್ತು ಮಾವೋವಾದಿಗಳಿಗೆ ಸಂಬಂಧಿಸಿದ ವಸ್ತುಗಳನ್ನು ಒಳಗೊಂಡಂತೆ ನಕ್ಸಲೀಯರಿಗೆ ಸೇರಿದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಈ ವರ್ಷ ಇಲ್ಲಿಯವರೆಗೆ ಕಂಕೇರ್, ಕೊಂಡಗಾಂವ್, ನಾರಾಯಣಪುರ, ಬಸ್ತಾರ್, ಬಿಜಾಪುರ, ದಾಂತೇವಾಡ ಮತ್ತು ಸುಕ್ಮಾ ಜಿಲ್ಲೆಗಳನ್ನು ಒಳಗೊಂಡಿರುವ ಬಸ್ತಾರ್ ವಿಭಾಗದಲ್ಲಿ ಭದ್ರತಾ ಸಿಬ್ಬಂದಿಯೊಂದಿಗಿನ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 131 ನಕ್ಸಲೀಯರು ಹತರಾಗಿದ್ದಾರೆ.
ಇತ್ತೀಚೆಗಷ್ಟೇ ಕಾರ್ಯಾಚರಣೆಯ ಹಿನ್ನಲೆಯಲ್ಲಿ ಜೂನ್ 5 ರಂದು ನಾರಾಯಣಪುರದಲ್ಲಿ ಆರು ನಕ್ಸಲೀಯರನ್ನು ಎನ್‌ಕೌಂಟರ್‌ನಲ್ಲಿ ಹೊಡೆದುರುಳಿಸಲಾಯಿತು, ಮೇ 23 ರಂದು ನಾರಾಯಣಪುರ-ಬಿಜಾಪುರ ಗಡಿಯಲ್ಲಿ ಏಳು ನಕ್ಸಲೀಯರು ಕೊಲ್ಲಲ್ಪಟ್ಟರು.
ಇದಕ್ಕೂ ಮೊದಲು, ಮೇ 10 ರಂದು ಬಿಜಾಪುರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಕನಿಷ್ಠ 12 ನಕ್ಸಲೀಯರು ಸಹ ಸಾವಿಗೀಡಾಗಿದ್ದರು. ಮತ್ತು ಏಪ್ರಿಲ್ 30 ರಂದು ನಾರಾಯಣಪುರ ಮತ್ತು ಕಂಕೇರ್ ಜಿಲ್ಲೆಗಳ ಗಡಿಯಲ್ಲಿ ಮೂವರು ಮಹಿಳೆಯರು ಸೇರಿದಂತೆ 10 ನಕ್ಸಲರನ್ನು ಹೊಡೆದುರುಳಿಸಲಾಯಿತು.
ನಿಮ್ಮ ಕಾಮೆಂಟ್ ಬರೆಯಿರಿ