ಬೆಂಗಳೂರು : ಕೇಂದ್ರದ ಎನ್ಡಿಎ ಸರ್ಕಾರದಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಹಾಗೂ ಬಳ್ಳಾರಿ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿರುವ ಇ.ತುಕಾರಾಂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಭರ್ಜರಿ ಗೆಲುವು ಸಾಧಿಸಿರುವ ಕುಮಾರಸ್ವಾಮಿ ಅವರು ಕೇಂದ್ರದಲ್ಲಿ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಬೆಂಗಳೂರಿಗೆ ಶುಕ್ರವಾರ ಆಗಮಿಸಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚನ್ನಪಟ್ಟಣ (Channapatna) ಕ್ಷೇತ್ರದಿಂದ ಸ್ಪರ್ಧಿಸಿ ಗೆಲವು ಸಾಧಿಸಿದ್ದರು. ಇದೀಗ, ಸಂಸರಾದ ಬಳಿಕ ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ವಿಧಾನಸೌಧಕ್ಕೆ ತೆರಳಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಬಳ್ಳಾರಿಯಿಂದ ಸ್ಪರ್ಧಿಸಿ ಭರ್ಜರಿ ಜಯ ಸಾಧಿಸಿದ್ದ ಕಾಂಗ್ರೆಸ್ ಸಂಸದ ಇ.ತುಕಾರಾಂ ಅವರು, ವಿಧಾನಸಭಾಧ್ಯಕ್ಷರ ಅನುಮತಿ ಮೇರೆಗೆ ಶುಕ್ರವಾರ ಕಾರ್ಯದರ್ಶಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಸಂಡೂರು ಕ್ಷೇತ್ರದಿಂದ ಸತತ ನಾಲ್ಕು ಬಾರಿ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದ ತುಕಾರಾಂ ಅವರು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಶ್ರೀರಾಮುಲು ವಿರುದ್ಧ ಭರ್ಜರಿ ಗೆಲುವು ದಾಖಲಿಸಿದ್ದರು.
ನಿಮ್ಮ ಕಾಮೆಂಟ್ ಬರೆಯಿರಿ