ಉಪ ಸಭಾಪತಿ ಹುದ್ದೆ ನೀಡದಿದ್ರೆ ಸ್ಪೀಕರ್ ಸ್ಥಾನಕ್ಕೆ ವಿಪಕ್ಷಗಳಿಂದ ಸ್ಪರ್ಧೆ..?

ನವದೆಹಲಿ : ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ನೂತನ ಎನ್‌ಡಿಎ ಸರ್ಕಾರ ರಚನೆಯಾಗಿ ಸಚಿವ ಸಂಪುಟದ ರಚನೆಯೂ ಆಗಿದೆ.
ಎನ್‌ಡಿಎ ಒಕ್ಕೂಟದ ಮುಂದೆ ಈಗ ಲೋಕಸಭೆ ಸ್ಪೀಕರ್ ಆಯ್ಕೆಯ ಸವಾಲಿದೆ. ಸರ್ಕಾರ ರಚನೆಯಾಗುವ ಮುನ್ನ ಜೆಡಿಯು ಮತ್ತು ಟಿಡಿಪಿ ಪಕ್ಷಗಳು ಸ್ಪೀಕರ್ ಹುದ್ದೆಗ ಪಟ್ಟು ಹಿಡಿದಿದೆ ಎಂದು ವರದಿಯಾಗಿತ್ತು. ಆ ವಿಷಯ ಸದ್ಯಕ್ಕೆ ತಣ್ಣಗಾಗಿದ್ದು ಎನ್‌ಡಿಎಯಿಂದ ಯಾರೇ ಸ್ಪೀಕರ್‌ ಸ್ಥಾನಕ್ಕೆ ಸ್ಪರ್ಧಿಸಿದರೂ ಬೆಂಬಲ ನೀಡುವುದಾಗಿ ಜೆಡಿಯು ಹಾಗೂ ಟಿಡಿಪಿ ಹೇಳಿವೆ.

ಈ ಮಧ್ಯೆ ಉಪ ಸ್ಪೀಕರ್ ಹುದ್ದೆ ನಮಗೆ ನೀಡಬೇಕು ಎಂಬ ಬೇಡಿಯಕೆಯನ್ನು ಪ್ರತಿಪಕ್ಷಗಳು ಆಡಳಿತ ಕೂಟದ ಮುಂದೆ ಇಟ್ಟಿದೆ ಎಂದು ವರದಿಯಾಗಿದೆ.
ಇಂಡಿಯಾ ಟುಡೇ ವರದಿ ಪ್ರಕಾರ, ಉಪ ಸ್ಪೀಕರ್ ಹುದ್ದೆ ನೀಡದಿದ್ದರೆ ಸ್ಪೀಕರ್ ಚುನಾವಣೆಗೆ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಾಗಿ ಪ್ರತಿಪಕ್ಷಗಳು ತಿಳಿಸಿವೆ ಎನ್ನಲಾಗಿದೆ.
ಈ ಬಾರಿ ನಿರೀಕ್ಷೆಗಿಂತ ಹೆಚ್ಚಿನ ಸ್ಥಾನಗಳನ್ನು ಪ್ರತಿಪಕ್ಷಗಳ ಇಂಡಿಯಾ ಮೈತ್ರಿಕೂಟ ಪಡೆದುಕೊಂಡಿದೆ. ಹೀಗಾಗಿ ಉಪ ಸ್ಪೀಕರ್ ಹುದ್ದೆ ನೀಡುವಂತೆ ಪಟ್ಟು ಹಿಡಿದಿದೆ. ಹೊಸ ಸರ್ಕಾರದ ಮೊದಲ ಸಂಸತ್‌ ಅಧಿವೇಶನಕ್ಕೂ ಮುನ್ನ ಈ ವಿಚಾರ ಮುನ್ನೆಲೆಗೆ ಬಂದಿದೆ.
ಅಲ್ಲದೆ, ಇಂಡಿಯಾ ಒಕ್ಕೂಟ ಪ್ರತಿಪಕ್ಷ ನಾಯಕನನ್ನೂ ಆಯ್ಕೆ ಮಾಡಬೇಕಿದೆ. ಕಾಂಗ್ರೆಸ್‌ ಈಗಾಗಲೇ ರಾಹುಲ್ ಗಾಂಧಿಯನ್ನು ಪ್ರತಿಪಕ್ಷ ನಾಯಕನನ್ನಾಗಿ ಮಾಡಲು ಸರ್ವಾನುಮತದ ನಿರ್ಣಯ ಕೈಗೊಂಡಿದೆ. ಆದರೆ ಇದು ಇಂಡಿಯಾ ಒಕ್ಕೂಟದ ಇತರ ಪಕ್ಷಗಳ ಮೇಲೆ ನಿರ್ಣಯ ನಿಂತಿದೆ.

ಪ್ರಮುಖ ಸುದ್ದಿ :-   ಕರ್ನಲ್ ಸೋಫಿಯಾ ಬಗ್ಗೆ ಸಚಿವ ವಿಜಯ ಶಾ ಹೇಳಿಕೆ | ಎಸ್ಐಟಿ ತನಿಖೆಗೆ ಸುಪ್ರೀಂ ಕೋರ್ಟ್‌ ಆದೇಶ ; ಬಂಧನಕ್ಕೆ ತಡೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement