ಫ್ರಿಡ್ಜ್‌ ಗಳಲ್ಲಿ ಗೋಮಾಂಸ ಪತ್ತೆಯಾದ ನಂತರ 11 ಮನೆಗಳು ನೆಲಸಮ

ಅಕ್ರಮ ಗೋಮಾಂಸ ವ್ಯಾಪಾರದ ವಿರುದ್ಧ ಕ್ರಮದ ಭಾಗವಾಗಿ ಮಧ್ಯಪ್ರದೇಶದ ಬುಡಕಟ್ಟು ಪ್ರಾಬಲ್ಯದ ಮಾಂಡ್ಲಾದಲ್ಲಿ 11 ವ್ಯಕ್ತಿಗಳು ಸರ್ಕಾರಿ ಭೂಮಿಯಲ್ಲಿ ನಿರ್ಮಿಸಿಕೊಂಡಿದ್ದ ಮೆನಗಳನ್ನು ನೆಲಸಮಗೊಳಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನೈನ್‌ಪುರದ ಭೈನ್‌ವಾಹಿ ಪ್ರದೇಶದಲ್ಲಿ ಮಾಂಸಕ್ಕಾಗಿ ಹೆಚ್ಚಿನ ಸಂಖ್ಯೆಯ ಹಸುಗಳನ್ನು ತರಲಾಗಿದೆ ಎಂಬ ಸುಳಿವು ದೊರೆತ ನಂತರ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮಂಡ್ಲಾ ಪೊಲೀಸ್ ವರಿಷ್ಠಾಧಿಕಾರಿ ರಜತ ಸಕ್ಲೇಚಾ ತಿಳಿಸಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

“ಪೊಲೀಸ್ ತಂಡ ಅಲ್ಲಿಗೆ ಧಾವಿಸಿತು, ಆರೋಪಿಗಳ ಹಿತ್ತಲಿನಲ್ಲಿ ಕಟ್ಟಿಹಾಕಲಾಗಿದ್ದ 150 ಹಸುಗಳನ್ನು ವಶಪಡಿಸಕೊಳ್ಳಲಾಗಿದೆ. ಎಲ್ಲ 11 ಆರೋಪಿಗಳ ಮನೆಗಳಲ್ಲಿನ ರೆಫ್ರಿಜರೇಟರ್‌ಗಳಿಂದ ಹಸುವಿನ ಮಾಂಸವನ್ನು ವಶಪಡಿಸಿಕೊಳ್ಳಲಾಗಿದೆ. ಕೊಠಡಿಯಲ್ಲಿದ್ದ ಪ್ರಾಣಿಗಳ ಕೊಬ್ಬು, ಜಾನುವಾರು ಚರ್ಮ ಮತ್ತು ಮೂಳೆಗಳನ್ನು ಕೂಡ ಪತ್ತೆ ಮಾಡಲಾಗಿದೆ” ಎಂದು ಅವರು ಹೇಳಿದ್ದಾರೆ.
ಸ್ಥಳೀಯ ಸರ್ಕಾರಿ ಪಶುವೈದ್ಯರು ವಶಪಡಿಸಿಕೊಂಡ ಮಾಂಸವು ದನದ ಮಾಂಸ ಎಂದು ದೃಢಪಡಿಸಿದ್ದಾರೆ. ದ್ವಿತೀಯ ಡಿಎನ್‌ಎ ವಿಶ್ಲೇಷಣೆಗಾಗಿ ನಾವು ಹೈದರಾಬಾದ್‌ಗೆ ಮಾದರಿಗಳನ್ನು ಕಳುಹಿಸಿದ್ದೇವೆ. 11 ಆರೋಪಿಗಳ ಮನೆಗಳು ಸರ್ಕಾರಿ ಭೂಮಿಯಲ್ಲಿದ್ದು, ಅಕ್ರಮವಾಗಿ ನಿರ್ಮಿಸಿಕೊಂಡಿದ್ದರಿಂದ ಅವುಗಳನ್ನು ನೆಲಸಮ ಮಾಡಲಾಗಿದೆ ಎಂದು ಎಸ್‌ಪಿ ತಿಳಿಸಿದ್ದಾರೆ. ಶುಕ್ರವಾರ ರಾತ್ರಿ ಹಸುಗಳು ಮತ್ತು ದನದ ಮಾಂಸವನ್ನು ವಶಪಡಿಸಿಕೊಂಡ ನಂತರ ಎಫ್‌ಐಆರ್ ದಾಖಲಿಸಲಾಗಿದೆ, ಈ ಸಂಬಂಧ ಓರ್ವ ಆರೋಪುಯನ್ನು ಬಂಧಿಸಲಾಗಿದ್ದು, 10 ಮಂದಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಹೇಳಿದರು.

ಪ್ರಮುಖ ಸುದ್ದಿ :-   ವ್ಲಾಗರ್, ವಿದ್ಯಾರ್ಥಿ, ಉದ್ಯಮಿ, ಗಾರ್ಡ್....: 9 ಮಂದಿ 'ಪಾಕಿಸ್ತಾನ ಗೂಢಚಾರರ' ಬಂಧನ

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement