ದರ್ಶನ್‌ ಪ್ರಕರಣ : ರೇಣುಕಾಸ್ವಾಮಿ ಅಪಹರಣಕ್ಕೆ ಬಳಕೆಯಾಗಿದ್ದ ಕಾರು ಜಪ್ತಿ

ಚಿತ್ರದುರ್ಗ : ರೇಣುಕಾ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಿಸಿಕೊಂಡು ಬೆಂಗಳೂರಿಗೆ ಕರೆದುಕೊಂಡ ಬರಲಾಗಿದ್ದ ಕಾರನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ರೇಣುಕಾ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಿಸಿಕೊಂಡು ಬೆಂಗಳೂರಿಗೆ ಕರೆದುಕೊಂಡು ಬರಲು ಪ್ರಕರಣದ 8ನೇ ಆರೋಪಿ ರವಿಶಂಕರ ಎಂಬಾತನ ಕಾರು ಬಳಸಲಾಗಿತ್ತು. ಚಿತ್ರದುರ್ಗದಲ್ಲಿರುವ ರವಿ ಮನೆಯಲ್ಲಿ ಪೊಲೀಸರು ಪರಿಶೀಲನೆ ನಡೆಸಿದ್ದು, ನಂತರ ಆತನ ಕಾರನ್ನು ಜಪ್ತಿ ಮಾಡಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಅಯ್ಯನಹಳ್ಳಿ ಗ್ರಾಮದ ಮನೆಯೊಂದರಲ್ಲಿ ಈತ ಕಾರನ್ನು ನಿಲ್ಲಿಸಿದ್ದ. ವಾಹನವನ್ನು ವಶಪಡಿಸಿಕೊಳ್ಳುವಾಗ ವಿಧಿವಿಜ್ಞಾನ ತಜ್ಞರು ಹಾಜರಿದ್ದರು.
ಪೊಲೀಸರು ರವಿ ಕುಟುಂಬದವರನ್ನು ವಿಚಾರಣೆಗೊಳಪಡಿಸಿ ಕಾರಿನಲ್ಲಿದ್ದ ಹಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.

ರೇಣುಕಾಸ್ವಾಮಿ ಕೊಲೆ ನಡೆದ ಬಳಿಕ ಆರೋಪಿ ರವಿ ನಟ ದರ್ಶನ್ ಹಾಗೂ ಗ್ಯಾಂಗ್‌ನಿಂದ 5 ಲಕ್ಷ ರೂಪಾಯಿ ಪಡೆದಿದ್ದಾನೆ ಎಂಬ ಆರೋಪವಿದೆ. ರವಿ ಮನೆಯಲ್ಲಿ ಪೊಲೀಸರು ಹಲವು ಗಂಟೆಗಳ ಕಾಲ ಪರಿಶೀಲನೆ ನಡೆಸಿದ್ದು, ಆರೋಪಿಯ ಮನೆಯಲ್ಲಿ ವಿಚಾರಣೆ ತೀವ್ರಗೊಂಡಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಮತ್ತು ಪವಿತ್ರಾ ಸೇರಿ 16ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ.
ಜೂನ್ 8ರಂದು ರೇಣುಕಾಸ್ವಾಮಿ ಅಪಹರಣಕ್ಕೆ ರವಿ ಕಾರು ಬಳಕೆ ಮಾಡಲಾಗಿತ್ತು ಹಾಗೂ ಜೂನ್ 9ರಂದು ಆರೋಪಿಗಳು ಅದೇ ಕಾರಿನಲ್ಲಿ ಚಿತ್ರದುರ್ಗಕ್ಕೆ ವಾಪಸ್ ಬಂದಿದ್ದರು ಎನ್ನಲಾಗಿದೆ.

ಪ್ರಮುಖ ಸುದ್ದಿ :-   ಕಾರವಾರ : ಭಾರತದ ನೌಕಾಪಡೆಗೆ ಸ್ವದೇಶಿ ನಿರ್ಮಿತ ಬಹುಪಯೋಗಿ ನೌಕೆ ‘ಐಎನ್‌ಎಸ್‌ ಸಮರ್ಥಕ್’ ಸೇರ್ಪಡೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement