ಪೋಕ್ಸೊ ಪ್ರಕರಣ : ಸಂತ್ರಸ್ತೆ ಮದುವೆಯಾಗಲು ಆರೋಪಿಗೆ ಮಧ್ಯಂತರ ಜಾಮೀನು ನೀಡಿದ ಹೈಕೋರ್ಟ್‌

ಬೆಂಗಳೂರು : ಮಗು ಮತ್ತು ಸಂತ್ರಸ್ತೆಯ ಹಿತ ರಕ್ಷಣೆಗೆ ಮುಂದಾಗಿರುವ ಕರ್ನಾಟಕ ಹೈಕೋರ್ಟ್‌ ಅಪ್ರಾಪ್ತೆ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲು ಪಾಲಾಗಿರುವ ಆರೋಪಿಗೆ (ವಿಚಾರಣಾಧೀನ ಕೈದಿ) ಸಂತ್ರಸ್ತೆ ವರಿಸಲು ಮಧ್ಯಂತರ ಜಾಮೀನು ಮಂಜೂರು ಮಾಡಿ ಅಪರೂಪದ ಆದೇಶ ಹೊರಡಿಸಿದೆ ಎಂದು ಬಾರ್‌ & ಬೆಂಚ್‌ ವರದಿ ಮಾಡಿದೆ.
“ಆರೋಪಿಯ ಲೈಂಗಿಕ ಸಂಪರ್ಕದಿಂದ ಸಂತ್ರಸ್ತೆಗೆ ಮಗು ಜನಿಸಿದೆ. ಸಂತ್ರಸ್ತೆಗೆ ಈಗ 18 ವರ್ಷ. ಈ ಹಿಂದೆ ಏನೆಲ್ಲಾ ಘಟನೆಗಳು ನಡೆದಿವೆ ಎನ್ನುವುದು ಮಗುವಿಗೆ ತಿಳಿದಿಲ್ಲ. ಮಗು ಮತ್ತು ಸಂತ್ರಸ್ತೆಯ ಹಿತ ರಕ್ಷಿಸಬೇಕಿದೆ. ಮಗು ಭವಿಷ್ಯದಲ್ಲಿ ಯಾವುದೇ ರೀತಿಯಲ್ಲಿ ಅಪಮಾನಕ್ಕೆ ಗುರಿಯಾಗಬಾರದು ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.
ಬಾರ್‌ & ಬೆಂಚ್‌ ವರದಿ ಪ್ರಕಾರ, ಅಪ್ರಾಪ್ತೆ ಮೇಲಿನ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪೋಕ್ಸೊ ಕಾಯಿದೆ ಅಡಿ ತನ್ನ ವಿರುದ್ಧ ದಾಖಲಾಗಿರುವ ಕ್ರಿಮಿನಲ್‌ ಪ್ರಕರಣ ರದ್ದುಪಡಿಸಲು ಕೋರಿ ಆರೋಪಿಯಾಗಿರುವ ಮೈಸೂರಿನ ವ್ಯಕ್ತಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ನಡೆಸಿತು.

ಪ್ರಮುಖ ಸುದ್ದಿ :-   ಇಬ್ಬರೂ ವೃತ್ತಿಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ: ರೋಹಿಣಿ ಸಿಂಧೂರಿ–ರೂಪಾ ಜಗಳದ ಕುರಿತು ಸುಪ್ರೀಂ ಕೋರ್ಟ್‌

ಸಂತ್ರಸ್ತೆಯನ್ನು ಮದುವೆಯಾಗಲು 2024ರ ಇಂದಿನಿಂದ (ಜೂ.17) ಅನ್ವಯವಾಗುವಂತೆ ಜುಲೈ 3ರ ವರೆಗೆ ಆರೋಪಿಯನ್ನು ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು. ಸಂತ್ರಸ್ತೆಯನ್ನು ಮದುವೆಯಾಗಿ ಆತ ಜುಲೈ 3ರ ಸಂಜೆ ಜೈಲಿಗೆ ಹಿಂದಿರುಗಬೇಕು. ಜುಲೈ 4ರಂದು ವಿವಾಹ ನೋಂದಣಿ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು. ಜಾಮೀನು ಮೇಲೆ ಹೊರಗಿರುವ ಸಮಯದಲ್ಲಿ ಆರೋಪಿ ಸಂಬಂಧಪಟ್ಟ ಪೊಲೀಸ್‌ ಠಾಣೆಗೆ ವಾರಕ್ಕೊಮ್ಮೆ ಹಾಜರಾಗಬೇಕು. ಒಂದು ವೇಳೆ ಮಧ್ಯಂತರ ಜಾಮೀನು ಮಂಜೂರಾತಿಯ ಉದ್ದೇಶ ಉಲ್ಲಂಘಿಸಿದರೆ, ಆ ನಡೆಯನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಹೇಳಿರುವ ಪೀಠವು ವಿಚಾರಣೆಯನ್ನು ಜುಲೈ 4ಕ್ಕೆ ಮುಂದೂಡಿದೆ.

ಪ್ರಕರಣದ ಹಿನ್ನೆಲೆ: ಆರೋಪಿ (23) ಮತ್ತು ಸಂತ್ರಸ್ತೆ ಪರಸ್ಪರ ಪ್ರೀತಿಸುತ್ತಿದ್ದರು. 2023ರ ಫೆಬ್ರವರಿ 15ರಂದು ಸಂತ್ರಸ್ತೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಿದ ಆರೋಪವಿದೆ. ಆ ಸಂದರ್ಭದಲ್ಲಿ ಶಾಲೆಯಲ್ಲಿ ಓದುತ್ತಿದ್ದ ಆಕೆಗೆ 16 ವರ್ಷ 9 ತಿಂಗಳು ಆಗಿತ್ತು. ಇದರಿಂದ ಸಂತ್ರಸ್ತೆಯ ತಾಯಿ ದೂರು ನೀಡಿದ್ದರು. ಪೋಕ್ಸೊ ಕಾಯಿದೆ ಅಡಿ ಆರೋಪಿ ವಿರುದ್ಧ ಪೊಲೀಸರು ಆರೋಪ ಪಟ್ಟಿ ಸಲ್ಲಿಸಿದ್ದರು. ಮೈಸೂರಿನ ಪೋಕ್ಸೊ ವಿಶೇಷ ನ್ಯಾಯಾಲಯದಲ್ಲಿ ಪ್ರಕರಣ ವಿಚಾರಣೆ ಹಂತದಲ್ಲಿದೆ.

ಪ್ರಮುಖ ಸುದ್ದಿ :-   ಕರ್ನಾಟಕದ 12 ಜಿಲ್ಲೆಗಳಲ್ಲಿ ಜೂ.15ರ ವರೆಗೆ ಜೋರಾದ ಮಳೆ ಮುನ್ಸೂಚನೆ

 

5 / 5. 4

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement