ವಿಚಾರಣೆ ವೇಳೆ ಪವಿತ್ರಾ ಗೌಡ ಅಸ್ವಸ್ಥ: ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ಬೆಂಗಳೂರು: ಚಿತ್ರದುರ್ಗ ನಿವಾಸಿ ರೇಣುಕಾಸ್ವಾಮಿ ಕೊಲೆ ಪ್ರಕರಣ ಆರೋಪಿ ಚಿತ್ರನಟ ದರ್ಶನ್‌ ಸ್ನೇಹಿತೆ ಹಾಗೂ ಕೊಲೆ ಪ್ರಕರಣ ಮೊದಲ ಆರೋಪಿ ಪವಿತ್ರಾ ಗೌಡ ವಿಚಾರಣೆ ವೇಳೆ ಅಸ್ವಸ್ಥರಾಗಿದ್ದು, ಪೊಲೀಸರು ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂದು ವರದಿಯಾಗಿದೆ.
ಕಾಮಾಕ್ಷಿಪಾಳ್ಯ ಪೊಲೀಸರ ಕಸ್ಟಡಿಯಲ್ಲಿರುವ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಗೆಳತಿ ಪವಿತ್ರಾ ಗೌಡ ಅಸ್ವಸ್ಥಗೊಂಡಿದ್ದು, ಹೀಗಾಗಿ ಇಂದು ಮಂಗಳವಾರ ಮಧ್ಯಾಹ್ನ ವೈದ್ಯರನ್ನು ಠಾಣೆಗೆ ಕರೆಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಪವಿತ್ರಾ ಗೌಡ ಅವರನ್ನು ವೈದ್ಯರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ ಎಂದು ಹೇಳಲಾಗಿದೆ. ಪೊಲೀಸ್ ಕಸ್ಟಡಿ ವೇಳೆ ಸರಿಯಾಗಿ ಊಟ, ತಿಂಡಿ ಸೇವಿಸದೆ ಇರುವುದರಿಂದ ಪವಿತ್ರಾ ಗೌಡ ಅಸ್ವಸ್ಥರಾಗಿದ್ದಾರೆ ಎನ್ನಲಾಗಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿದಿನ ಸಂಜೆ ಪವಿತ್ರಾರನ್ನು ಮಹಿಳಾ ಸಾಂತ್ವನ ಕೇಂದ್ರಕ್ಕೆ ಕರೆದೊಯ್ದು, ಬೆಳಗ್ಗೆ ಪೊಲೀಸರು ವಿಚಾರಣೆಗೆ ಠಾಣೆಗೆ ಕರೆತರುತ್ತಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement