ಜೂನ್ 21ರಿಂದ 10 ದಿನ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಮುನ್ಸೂಚನೆ

ಬೆಂಗಳೂರು : ಈ ಬಾರಿ ಮುಂಗಾರು ಈವರೆಗೆ ತಕ್ಕಮಟ್ಟಿಗೆ ಸಮಾಧಾನ ನೀಡಿದ್ದರೂ ಕೆಲವು ಕಡೆಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗದರೆ ಕೆಲವು ಭಾಗಗಳಲ್ಲಿ ಮಳೆಯ ಕೊರತೆಯಾಗಿದೆ.
ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ ಮಳೆ ಉತ್ತಮವಾಗಿದೆ, ಆದರೆ ಕರಾವಳಿ ಹಾಗೂ ಮಲೆನಾಡಿನ ಹಲವು ಭಾಗಗಳಲ್ಲಿ ಮಳೆ ಕೊರತೆ ಕಂಡುಬಂದಿದೆ. ಇದೇ ವೇಳೆ ಇನ್ನೆರಡು ದಿನಗಳಲ್ಲಿ ರಾಜ್ಯದಲ್ಲಿ ಮುಂಗಾರು ಮತ್ತಷ್ಟು ಚುರುಕಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ….
ಜೂನ್ 21ರಿಂದ ಜುಲೈ ಮೊದಲನೇ ವಾರದವರೆಗೆ ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

ಜೂನ್‌ 22ರಿಂದ ವಿಶೇಷವಾಗಿ ಕರಾವಳಿ ಕರ್ನಾಟಕ ಮತ್ತು ಮಲೆನಾಡಿನ ಘಟ್ಟಗಳ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯನ್ನು ನಿರೀಕ್ಷೆ ಮಾಡಬಹುದು ಎಂದು ಅದು ಹೇಳಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ಜೂನ್ 21 ರಿಂದ ಜೂನ್ 26 ರವರೆಗೆ ವ್ಯಾಪಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜೂನ್ 26 ರವರೆಗೆ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಚದುರಿದಂತೆ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿದೆ. ಇದಲ್ಲದೆ, ಜೂನ್ 22 ಮತ್ತು 23 ರಿಂದ ಮಳೆಯ ಪ್ರಮಾಣವು ಹೆಚ್ಚಾಗುವ ಸಾಧ್ಯತೆಯಿದೆ, ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ಕೂಡ ಜೂನ್ 21ರಿಂದ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ಪ್ರಮುಖ ಸುದ್ದಿ :-   ಸಿಎಂ ಬದಲಾವಣೆ ಕುರಿತು ಹೇಳಿಕೆ ; ಕಾಂಗ್ರೆಸ್‌ ಶಾಸಕ ಇಕ್ಬಾಲ್ ಹುಸೇನಗೆ ಕೆಪಿಸಿಸಿಯಿಂದ ಶೋಕಾಸ್ ನೋಟಿಸ್

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement