ಬೆಂಗಳೂರು : ಕರ್ನಾಟಕದಲ್ಲಿ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್(HSRP) ಅಳವಡಿಕೆಗೆ ನೀಡಿದ್ದ ಗಡುವನ್ನು ರಾಜ್ಯ ಸರ್ಕಾರ ಸೆಪ್ಟೆಂಬರ್ 15ರ ವರೆಗೆ ಗಡುವು ವಿಸ್ತರಿಸಿದೆ. ಈ ಕುರಿತು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ವಾಹನಗಳ ಸುರಕ್ಷತೆಗಾಗಿ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ (HSRP) ಅಳವಡಿಕೆಯನ್ನ ಕಡ್ಡಾಯ ಮಾಡಲಾಗಿದೆ.
ಕರ್ನಾಟಕ ರಾಜ್ಯದಲ್ಲಿ 1ನೇ ಏಪ್ರಿಲ್ 2019ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲಾ (ಹಳೆಯ / ಅಸ್ತಿತ್ವದಲ್ಲಿರುವ ವಾಹನಗಳು) (ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನಗಳು, ಪ್ರಯಾಣಿಕ ಕಾರುಗಳು, ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರೈಲರ್, ಟ್ರ್ಯಾಕ್ಟರ್ ಇತ್ಯಾದಿ) ವಾಹನಗಳಿಗೆ ಎಚ್ಎಸ್ಆರ್ಪಿ (HSRP) ಅಳವಡಿಸುವುದು ಕಡ್ಡಾಯವಾಗಿದೆ.
ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಲು ಜೂನ್ 12 ಕೊನೆ ದಿನವಾಗಿತ್ತು. ಡೆಡ್ಲೈನ್ ಬೆನ್ನಲ್ಲೇ ಹೈಕೋರ್ಟ್ ಹೆಚ್ಎಸ್ಆರ್ಪಿ ಅಳವಡಿಸದವರ ವಿರುದ್ಧ ಜುಲೈ 4ರ ವರೆಗೆ ಯಾವುದೇ ಕ್ರಮ ತೆಗೆದುಕೊಳ್ಳದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿತ್ತು. ಜೊತೆಗೆ ಹೆಚ್ಎಸ್ಆರ್ಪಿ ಅಳವಡಿಕೆಯ ಗಡುವು ವಿಸ್ತರಣೆ ಮಾಡಲು ಅನುಮತಿ ನೀಡಿತ್ತು. ಈಗ ರಾಜ್ಯ ಸರ್ಕಾರ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಿಸಿದೆ. ಸರ್ಕಾರ ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಿದೆ.


ನಿಮ್ಮ ಕಾಮೆಂಟ್ ಬರೆಯಿರಿ