ಬೆಂಗಳೂರು : ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು ಇದೇ ಜೂನ್ 30 ರಂದು ನಡೆಸಲಿರುವ ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಈ ಪರೀಕ್ಷೆಗೆ ನೋಂದಣಿ ಮಾಡಿರುವ ಅಭ್ಯರ್ಥಿಗಳು ಗುರುವಾರದಿಂದ (ಜೂನ್ 20) ತಮ್ಮ ಪರೀಕ್ಷೆ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು http://schooleducation.kar.nic.in ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಹಾಲ್ಟಿಕೆಟ್ಗಳನ್ನು ಡೌನ್‌ಲೋಡ್ ಮಾಡಬಹುದು.
ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ಪೇಪರ್ 1 ಮತ್ತು ಪೇಪರ್ 2 ಎಂದು ಎರಡು ಭಾಗಗಳಾಗಿ ವಿಂಗಡಿಸಲಾಗಿದೆ. ಪರೀಕ್ಷೆಗಳು 2:30 ತಾಸುಗಳ ಕಾಲ ಇರುತ್ತವೆ. ಪೇಪರ್ 1 ಬೆಳಗ್ಗೆ 9:30 ರಿಂದ ಮಧ್ಯಾಹ್ನ 12 ರವರೆಗೆ ನಡೆಯಲಿದ್ದು, ಪೇಪರ್ 2 ಮಧ್ಯಾಹ್ನ 2 ರಿಂದ 4:30 ರವರೆಗೆ ನಡೆಯಲಿದೆ.
ಪ್ರವೇಶ ಪತ್ರ ಡೌನ್‌ಲೋಡ್ ಮಾಡುವ ವಿಧಾನ
http://schooleducation.kar.nic.in ನಲ್ಲಿ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಹೋಗಿ.
ಮುಖಪುಟದಲ್ಲಿ, ‘ಇತ್ತೀಚಿನ ಮಾಹಿತಿ’ ವಿಭಾಗಕ್ಕೆ ಹೋಗಿ ಮತ್ತು KARTET 2024 -Admit Card’ ಗೆ ಸಂಬಂಧಿತ ಲಿಂಕ್ ಮೇಲೆ ಕ್ಲಿಕ್ ಮಾಡಿ.
– ಮತ್ತೊಂದು ವೆಬ್‌ಪೇಜ್ ತೆರೆಯುತ್ತದೆ. ಇಲ್ಲಿ ಅಪ್ಲಿಕೇಶನ್ ನಂಬರ್ ಹಾಗೂ ಜನ್ಮ ದಿನಾಂಕ ಮಾಹಿತಿ ಭರ್ತಿ ಮಾಡಬೇಕು.
– ‘Submit’ ಎಂದು ಇರವಲ್ಲಿ ಕ್ಲಿಕ್ ಮಾಡಬೇಕು.
– ಪ್ರವೇಶ ಪತ್ರ ಸ್ಕ್ರೀನ್ ಮೇಲೆ ಕಾಣಿಸುತ್ತದೆ. ಅದನ್ನೊಮ್ಮೆ ಪರಿಶೀಲಿಸಿ ಡೌನ್‌ಲೋಡ್ ಮಾಡಿಕೊಳ್ಳಬಹುದು.
ನಿಮ್ಮ ಕಾಮೆಂಟ್ ಬರೆಯಿರಿ