ಬೆಂಗಳೂರು : ದೇಶದ ಪ್ರಧಾನಿ, ರಾಜ್ಯದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಸಚಿವರ ವಿರುದ್ಧ ಕೆಟ್ಟ ಭಾಷೆ ಬಳಸಬಾರದು” ಎಂದು ಕರ್ನಾಟಕ ಹೈಕೋರ್ಟ್ ಮೌಖಿಕವಾಗಿ ಶುಕ್ರವಾರ ಹೇಳಿದೆ.
ಪ್ರಕರಣವೊಂದರ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಸಾಮಾಜಿಕ ಜಾಲತಾಣದ ಉಸ್ತುವಾರಿ ಪ್ರಶಾಂತ ಮಾಕನೂರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ವೇಳೆ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಏಕಸದಸ್ಯ ಪೀಠ ಮೌಖಿಕವಾಗಿ ಈ ಮಾತನ್ನು ಹೇಳಿದೆ.
ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡ ಪ್ರಕರಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಮತ್ತು ಪ್ರಶಾಂತ ಮಾಕನೂರು ಅವರ ನಡೆಗೆ ನ್ಯಾಯಾಲಯ ಅತೃಪ್ತಿ ವ್ಯಕ್ತಪಡಿಸಿತು.
ಅರ್ಜಿದಾರರ ವಿರುದ್ಧ ಬೆಂಗಳೂರಿನ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎರಡು ಪ್ರತ್ಯೇಕ ಎಫ್ಐಆರ್ಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿತು. ಅಲ್ಲದೆ, ಪ್ರತಿವಾದಿಯಾಗಿರುವ ಮಲ್ಲೇಶ್ವರ ಠಾಣಾ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿದೆ.
ನಿಮ್ಮ ಕಾಮೆಂಟ್ ಬರೆಯಿರಿ