ಸೂರಜ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ವ್ಯಕ್ತಿ ವಿರುದ್ಧ ಎಫ್‌ಐಆರ್

ಹಾಸನ : ಪ್ರಜ್ವಲ್‌ ಸಹೋದರ ಸೂರಜ್‌ ರೇವಣ್ಣ (Suraj Revanna Case) ವಿರುದ್ಧ ಸಲಿಂಗ ಕಾಮ (unnatural sexual abuse) ಆರೋಪ ಕೇಳಿಬಂದಿದೆ. ಮತ್ತೊಂದೆಡೆ ಈ ಆರೋಪ ಮಾಡಿರುವ ಜೆಡಿಎಸ್​ ಕಾರ್ಯಕರ್ತನ ವಿರುದ್ಧವೇ ಎಫ್‌ಐಆರ್‌ ದಾಖಲಾಗಿದೆ.
ವಿಧಾನಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ವಿರುದ್ಧ ಸಲಿಂಗ ಕಾಮ ಆರೋಪ ಮಾಡಿ ಅರಕಲಗೂಡಿನ ಜೆಡಿಎಸ್‌ ಕಾರ್ಯಕರ್ತ ದೂರು ನೀಡಿದ್ದರು. ಆದರೆ, ಸುಳ್ಳು ಆರೋಪ ಮಾಡಿ ಹಣಕ್ಕಾಗಿ ಪೀಡಿಸುತ್ತಿದ್ದಾರೆ ಎಂದು ಸೂರಜ ರೇವಣ್ಣ ಆಪ್ತ ಶಿವಕುಮಾರ ಅವರು ನೀಡಿದ ದೂರಿನ ಮೇರೆಗೆ ಹೊಳೆನರಸೀಪುರ ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ವಿಧಾನ ಪರಿಷತ್‌ ಸದಸ್ಯ ಸೂರಜ್ ರೇವಣ್ಣ ವಿರುದ್ಧ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ದೂರು ನೀಡುವುದಾಗಿ ಬೆದರಿಕೆ ಹಾಕಿದ್ದ. ಐದು ಕೋಟಿ ಹಣ ನೀಡದಿದ್ದರೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ. ಸುಳ್ಳು ಬೆದರಿಕೆ ಉಲ್ಲೇಖಿಸಿ ಸೂರಜ ರೇವಣ್ಣ ಆಪ್ತ ಶಿವಕುಮಾರ ದೂರು ನೀಡಿದ್ದಾರೆ.

ನಿಮ್ಮ ಬಾಸ್ ಬಳಿ ಕೆಲಸ ಕೊಡಿಸು ಎಂದು ಅರಕಲಗೂಡು ಮೂಲದ ಯುವಕ ಕೇಳಿಕೊಂಡಿದ್ದ. ನೀನೇ ಹೋಗಿ ಬಾಸ್ ಭೇಟಿ ಮಾಡು ಎಂದು ಫೊನ್ ನಂಬರ್ ಕೊಟ್ಟಿದ್ದೆ. ಜೂನ್ 16 ರಂದು ಗನ್ನಿಕಡದ ತೋಟದ ಮನೆಗೆ ಕೆಲಸ ಕೇಳಲು ಸಂತ್ರಸ್ತ ಹೋಗಿದ್ದ. ಕೆಲಸ ಕೇಳಿ ವಾಪಸ್ ಬಂದ ನಂತರದಿಂದ ಆತ ಬ್ಲ್ಯಾಕ್‌ ಮಾಡುತ್ತಿದ್ದಾನೆ ಎಂದು ಆರೋಪಿಸಲಾಗಿದೆ. ನೀನು ಕೆಲಸ ಕೊಡಿಸಲ್ಲ, ನಿಮ್ಮ ಬಾಸೂ ಕೆಲಸ ಕೊಡಿಸ್ತಿಲ್ಲ. ನನಗೆ ತುಂಬಾ ಕಷ್ಟ ಇದೆ, ನನಗೆ ಹಣ ಬೇಕು. ನೀನು, ನಿಮ್ಮ ಬಾಸ್‌ನಿಂದ ಐದು ಕೋಟಿ ರೂ. ಹಣ ಕೊಡಿಸದಿದ್ದರೆ, ಅವರ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸುತ್ತೇನೆ ಎಂದು ಸಂತ್ರಸ್ತ ಬೆದರಿಕೆ ಹಾಕಿದ್ದಾನೆ ಎಂದು ದೂರುದಾರ ಶಿವಕುಮಾರ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಸಿಎಂ ಬದಲಾವಣೆ ಕುರಿತು ಹೇಳಿಕೆ ; ಕಾಂಗ್ರೆಸ್‌ ಶಾಸಕ ಇಕ್ಬಾಲ್ ಹುಸೇನಗೆ ಕೆಪಿಸಿಸಿಯಿಂದ ಶೋಕಾಸ್ ನೋಟಿಸ್

ಈ ವಿಚಾರವನ್ನು ನಾನುಸೂರಜ ರೇವಣ್ಣ ಅವರಿಗೆ ತಿಳಿಸಿದೆ. ಆತ ಕೆಲಸ ಕೇಳಿಕೊಂಡು ಮನೆಗೆ ಬಂದಾಗ ಭದ್ರತೆಯ ಪೊಲೀಸರು ಸೇರಿ ಹಲವಾರು ಜನರು ಇದ್ದರು. ನಾನೇನು ತಪ್ಪು ಮಾಡಿಲ್ಲ, ಯಾಕೆ ಹಣ ಕೊಡಬೇಕು ಎಂದು ಅವರು ಹೇಳಿದರು. ನಂತರ ಜೂನ್ 18 ರಂದು ಹಾಸನದ ಜಿಲ್ಲಾಸ್ಪತ್ರೆಗೆ ಬಂದು ಆಸ್ಪತ್ರೆ ಚೀಟಿಗೆ ಎಂಎಲ್‌ಸಿ ಸೀಲ್ ಹಾಕಿಸಿ ಫೋಟೊ ಹಾಕಿ ಬೆದರಿಕೆ ಹಾಕಿದ್ದಾನೆ. ಆಸ್ಪತ್ರೆ ಚೀಟಿ ತೋರಿಸಿ ಮತ್ತೆ ಹಣಕ್ಕಾಗಿ ಡಿಮ್ಯಾಂಡ್ ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಮೊದಲು
ಐದು ಕೋಟಿ ರೂ. ಬೇಡಿಕೆ ಇಡಲಾಗಿತ್ತು. ನಂತರ ಮೂರು ಕೋಟಿ ಅಥವಾ ಕಡೆಗೆ ಎರಡೂವರೆ ಕೋಟಿಯಾದರೂ ಹಣ ಕೊಡಿಸು ಎಂದು ಡಿಮ್ಯಾಂಡ್ ಮಾಡಿದ್ದಾನೆ. ಹಣ ಕೊಡಿಸದಿದ್ದರೆ ಅವರ ಮರ್ಯಾದೆ ಕಳೆಯುತ್ತೇನೆ ಎಂದು ಬ್ಲ್ಯಾಕ್ ಮೇಲ್ ಮಾಡಿದ ಬಗ್ಗೆ ದೂರು ಸಲ್ಲಿಸಲಾಗಿದೆ ಎಂದು ಸೂರಜ ರೇವಣ್ಣ ಅವರ ಆಪ್ತ ಶಿವಕುಮಾರ ಹೇಳಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement