ಭಟ್ಕಳ: ಮಹಾರಾಷ್ಟ್ರದ ಪುಣೆಯಲ್ಲಿ ನಡೆಸಿರುವ ಉಗ್ರ ಚಟುವಟಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ಆರೋಪಿ ಭಟ್ಕಳ ನವಾಯತ ಕಾಲೋನಿಯ ಯುವಕನಿಗೆ ವಿಚಾರಣೆಗೆ ಹಾಜರಾಗುವಂತೆ ಮುಂಬೈ ಎಟಿಎಸ್ ತಂಡ ಮನೆಗೆ ನೋಟೀಸ್ ಅಂಟಿಸಿದೆ ಎಂದು ವರದಿಯಾಗಿದೆ.
ಮೂಲತಃ ಭಟ್ಕಳ ನವಾಯತ್ ಕಾಲೋನಿ ಹಾಜಿ ಮಂಜಿಲ್ ನಿವಾಸಿಯಾಗಿರುವ ಅಬ್ದುಲ್ ಕಾದಿರ್ ಸುಲ್ತಾನ್ ಅಲಿಯಾಸ್ ಮೌಲಾನಾ ಸುಲ್ತಾನ ಎಂಬ ಶಂಕಿನ ಮೇಲೆ ಪುಣೆಯಲ್ಲಿ ಕಾನೂನು ಬಾಹಿರ ಕೃತ್ಯ ಎಸಗಿದ್ದಕ್ಕಾಗಿ ಕಲಂ 10 ಮತ್ತು 13 ರನ್ವಯ ಪ್ರಕರಣ ದಾಖಲಾಗಿದ್ದು ಪುಣೆಯ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯದ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನಲ್ಲಿ ತಿಳಿಸಲಾಗಿದೆ.
ಭಟ್ಕದಲ್ಲಿ ಶೋಧ ನಡೆಸಿದ ತಂಡ ಅಂತಿಮವಾಗಿ ಆತನ ಮನೆಗೆ ನೋಟೀಸು ಅಂಟಿಸಿ ಹೋಗಿದ್ದಾಗಿ ತಿಳಿದು ಬಂದಿದೆ. ಮುಂಬೈ ಎಟಿಎಸ್ ತಂಡ ಈತನಿಗಾಗಿ ಭಟ್ಕಳಕ್ಕೆ ಆಗಮಿಸಿಮನೆಯನ್ನು ಹುಡುಕಿದ್ದು ಆತ ಮನೆಯಲ್ಲಿ ಇಲ್ಲದ ಕಾರಣ ಮನೆ, ಭಟ್ಕಳ ತಹಶೀಲ್ದಾರ್ ಕಚೇರಿ ಹಾಗೂ ಪುರಸಭೆಯ ನೋಟಿಸ್ ಬೋರ್ಡಿಗೆ ಪುಣೆ ನ್ಯಾಯಾಲಯದಲ್ಲಿ ನಡೆಯಲಿರುವ ವಿಚಾರಣೆಗೆ ಹಾಜರಾಗುವಂತೆ ಸೂಚನೆ ಇರುವ ನೋಟಿಸ್ ಅಂಟಿಸಿ ತೆರಳಿದ್ದಾರೆ ಎನ್ನಲಾಗಿದೆ.
2008 ರಲ್ಲಿ ಪುಣೆಯಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದಲ್ಲಿ ಆರೋಪಿಯಾಗಿರುವ ಅಬ್ದುಲ್ ಖಾದಿರ್ ಸುಲ್ತಾನ ಅಲಿಯಾಸ್ ಮೌಲಾನಾ ಸುಲ್ತಾನ ಕಳೆದ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದಾನೆ.
ನಿಮ್ಮ ಕಾಮೆಂಟ್ ಬರೆಯಿರಿ