ಲೈಂಗಿಕ ದೌರ್ಜನ್ಯ ಆರೋಪ: ಡಾ.ಸೂರಜ ರೇವಣ್ಣ ವಿರುದ್ಧ ಪ್ರಕರಣ ದಾಖಲು

ಹಾಸನ: ವಿಧಾನ ಪರಿಷತ್‌ ಸದಸ್ಯ ಡಾ.ಸೂರಜ್ ರೇವಣ್ಣ ವಿರುದ್ಧ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಅವರ ಎಫ್​ಐಆರ್ ದಾಖಲಾಗಿದೆ.
ಸಂತ್ರಸ್ತ ನೀಡಿದ ದೂರು ಆಧರಿಸಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 377, 342 ಹಾಗೂ 506 ಅಡಿ ಕೇಸ್ ದಾಖಲು ಮಾಡಲಾಗಿದೆ.
ಶುಕ್ರವಾರ (ಜೂ.21) ಬೆಂಗಳೂರಿನ ಡಿಜಿ ಕಚೇರಿಗೆ ದೂರು ನೀಡಿದ್ದ ಸಂತ್ರಸ್ತ ದೂರು ನೀಡುವಾಗಲೇ ಹಾಸನ ಜಿಲ್ಲಾಧಿಕಾರಿಗೆ ದೂರಿನ ಪ್ರತಿ ಇ-ಮೇಲ್ ಮಾಡಿದ್ದರು. ಮೇಲ್ ಮಾಡಿದ್ದ ಬಗ್ಗೆಯೂ ವಿಡಿಯೋ ಹೇಳಿಕೆಯಲ್ಲಿ ಮಾಹಿತಿ ಹಂಚಿಕೊಂಡಿದ್ದರು. ಮೇಲ್ ಆಧರಿಸಿ ಸಂತ್ರಸ್ತನನ್ನ ಕರೆಸಿ ಮಾಹಿತಿ ಪಡೆದು ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ.
ಇಂದು ಶನಿವಾರ ಹಾಸನದ ಜಿಲ್ಲಾ ಪೊಲೀಸ್ ಕಚೇರಿಗೆ ಸಂತ್ರಸ್ತನ ದೂರು ತಲುಪಿದ್ದು, ಜಿಲ್ಲಾ ಪೊಲೀಸ್ ಕಚೇರಿಗೆ ಬಂದ ದೂರನ್ನು ಅಧಿಕಾರಿಗಳನ್ನು ಹೊಳೆನರಸೀಪುರ ಗ್ರಾಮಾಂತರ ಠಾಣೆ ಪೊಲೀಸರಿಗೆ ವರ್ಗಾಯಿಸಿದ್ದಾರೆ.

ಈ ಹಿನ್ನಲೆಯಲ್ಲಿ ಹೊಳೆನರಸೀಪುರ ಗ್ರಾಮಾಂತರ ಠಾಣೆಗೆ ಶನಿವಾರ ಸಂಜೆ ಅರಕಲಗೂಡು ತಾಲೂಕು ಮೂಲದ ಸಂತ್ರಸ್ತ ಆಗಮಿಸಿದ್ದು, ಹೇಳಿಕೆ ದಾಖಲಿಸಿದ್ದಾರೆ.
‘ವಿಧಾನಪರಿಷತ್ ಸದಸ್ಯ ಡಾ.ಸೂರಜ ರೇವಣ್ಣ ಅವರು ತಮ್ಮ ಗನ್ನಿಗಡದ ಫಾರಂಹೌಸ್‌ಗೆ ಬರಮಾಡಿಕೊಂಡು ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಹನುಮನಹಳ್ಳಿ ಗ್ರಾಮದ ಶಿವಕುಮಾರ ಮತ್ತು ಸೂರಜ್ ರೇವಣ್ಣ ಅವರಿಂದ ತಮಗೆ ಹಾಗೂ ತಮ್ಮ ಕುಟುಂಬಕ್ಕೆ ಜೀವ ಬೆದರಿಕೆ ಇದೆ. ಇವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಯುವಕ ಲಿಖಿತ ದೂರು ನೀಡಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

‘ನನ್ನ ವಿರುದ್ಧ ಷಡ್ಯಂತ್ರ’
‘ನನ್ನ ವಿರುದ್ಧ ಷಡ್ಯಂತ್ರ ನಡೆಸಲಾಗಿದೆ. ಇಲ್ಲಸಲ್ಲದ ಆರೋಪ ಮಾಡಲಾಗುತ್ತಿದೆ. ಕಾನೂನಿನಂತೆ ಏನು ಆಗಬೇಕೋ ಅದು ಆಗುತ್ತದೆ. ಆತನ ವಿರುದ್ಧವೂ ಪ್ರಕರಣ ದಾಖಲಾಗಿದೆ. ತನಿಖೆಯ ನಂತರ ಸತ್ಯಾಸತ್ಯತೆ ಹೊರಬರಲಿದೆ.ಇದು ಸಂಪೂರ್ಣ ರಾಜಕೀಯ ಷಡ್ಯಂತ್ರ. ಈ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ನೀಡುವುದಿಲ್ಲ. ತನಿಖೆ ನಡೆಯಲಿ. ರಾಜ್ಯದ ಜನ ಎಲ್ಲವನ್ನೂ ನೋಡುತ್ತಾರೆ’ ಎಂದು ಡಾ.ಸೂರಜ ರೇವಣ್ಣ ಪ್ರತಿಕ್ರಿಯಿಸಿದ್ದಾರೆ
ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ಯುವಕನ ವಿರುದ್ಧ ಹೊಳೆನರಸೀಪುರ ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಯುವಕ ಸುಳ್ಳು ಆರೋಪ ಮಾಡಿ ಹಣಕ್ಕಾಗಿ ಪೀಡಿಸಿ, ಸೂರಜ್‌ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ದೂರು ನೀಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಿ ಎಂಎಲ್‌ಸಿ ಅವರ ಆಪ್ತ ಶಿವಕುಮಾರ್ ನೀಡಿದ ದೂರು ನೀಡಿದ್ದು ಐಪಿಸಿ ಸೆಕ್ಸೆನ್ 384, 506 ರ ಅಡಿಯಲ್ಲಿ 168/2024 ರಡಿ ಪ್ರಕರಣ ದಾಖಲಾಗಿದೆ.

ಪ್ರಮುಖ ಸುದ್ದಿ :-   ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement