ಚಿತ್ರದುರ್ಗ : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಮತ್ತೊಂದು ಮಹತ್ವದ ಸಾಧನೆ ಮಾಡಿದೆ. ಇಸ್ರೋದ ಮರುಬಳಕೆ ಮಾಡಬಹುದಾದ ಉಡಾವಣಾ ವಾಹನದ ಸ್ವಯಂಚಾಲಿತ ಲ್ಯಾಂಡಿಂಗ್ ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಿದೆ. ಚಿತ್ರದುರ್ಗದಲ್ಲಿರುವ ಇಸ್ರೋದ ಏರೋನಾಟಿಕಲ್ ಪರೀಕ್ಷಾ ವಲಯದಲ್ಲಿ ಈ ಕಾರ್ಯಾಚರಣೆ ಭಾನುವಾರ ಯಶಸ್ವಿಯಾಗಿ ನಡೆದಿದ್ದು, ಈ ಕುರಿತು ಇಸ್ರೋ ಟ್ವೀಟ್ ಮೂಲಕ ಮಾಹಿತಿ ನೀಡಿದೆ.
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕುದಾಪುರ ಗ್ರಾಮದಲ್ಲಿರುವ ಇಸ್ರೋ ಸಂಸ್ಥೆಯ ಏರೋನಟಕಲ್ ಟೆಸ್ಟ್ ರೇಂಜ್ (ATR) ಆವರಣದ ರನ್ ವೇನಲ್ಲಿ ಭಾನುವಾರ ಬೆಳಗ್ಗೆ 7:10 ಗಂಟೆ ವೇಳೆ ನಡೆಸಿರುವ ಪ್ರಯೋಗ ಯಶಸ್ವಿಯಾಗಿದೆ ಎಂದು ಇಸ್ರೋ ತನ್ನ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.
ಚಳ್ಳಕೆರೆ ಬಳಿಯ ಎಟಿಆರ್ನಲ್ಲಿ (ಏರೋನಾಟಿಕಲ್ ಟೆಸ್ಟ್ ರೇಂಜ್) ಇಸ್ರೋದ ‘ಪುಷ್ಪಕ’ ಆರ್ಎಲ್ವಿ-ಎಲ್ಇಎಕ್ಸ್-3 (RLV LEX)ದ ಲ್ಯಾಂಡಿಂಗ್ ಯಶಸ್ವಿಯಾಗಿ ಆಗಿದೆ.
ಉಪಗ್ರಹವನ್ನು ಕಕ್ಷೆಗೆ ಸೇರಿಸಿದ ನಂತರ ಅದು ಯಶಸ್ವಿಯಾಗಿ ಭೂಮಿಗೆ ಲ್ಯಾಂಡ್ ಆಗುವ ರಾಕೆಟ್ ಅನ್ನು ಇಸ್ರೋ ಅಭಿವೃದ್ಧಿಪಡಿಸಿದ್ದು, ಚಿತ್ರದುರ್ಗದಲ್ಲಿರುವ ಏರೋನಾಟಿಕಲ್ ಟೆಸ್ಟ್ ರೇಂಜ್ ನಲ್ಲಿ ಈ ಮರುಬಳಕೆ ಮಾಡಬಹುದಾದ ಲಾಂಚ್ ವೆಹಿಕಲ್ ಅಟಾನಮಸ್ ಲ್ಯಾಂಡಿಂಗ್ ಮಿಷನ್ (RLV LEX) ಪರೀಕ್ಷೆಯನ್ನು ನಡೆಸಿತು.
ಮರುಬಳಕೆ ಮಾಡಬಹುದಾದ ಉಡಾವಣಾ ವಾಹನ ಲ್ಯಾಂಡಿಂಗ್ ಅನ್ನು ಡಿಆರ್ಡಿಒ ಮತ್ತು ಭಾರತೀಯ ವಾಯುಪಡೆಯೊಂದಿಗೆ ಜಂಟಿಯಾಗಿ ಪರೀಕ್ಷಿಸಿದೆ ಎಂದು ಇಸ್ರೋ ಹೇಳಿದೆ.
ವಿಶ್ವದಲ್ಲಿಯೇ ಮೊದಲ ಬಾರಿಗೆ ರೆಕ್ಕೆಯ ಉಡಾವಣಾ ವಾಹನವನ್ನು ಹೆಲಿಕಾಪ್ಟರ್ ಮೂಲಕ 4.5 ಕಿ.ಮೀ ಎತ್ತರಕ್ಕೆ ಕೊಂಡೊಯ್ಯಲಾಯಿತು. ಆ ಬಳಿಕ ಆಕಾಶದಿಂದ ರನ್ ವೇ ಮೇಲೆ ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗಿದೆ.
ಭಾನುವಾರ ಬೆಳಗ್ಗೆ 7.10 ಕ್ಕೆ ಅದು ಚಿತ್ರದುರ್ಗ ಜಿಲ್ಲೆಯ ಕುದಾಪುರ ಗ್ರಾಮದಲ್ಲಿರುವ ಎಟಿಆರ್ ನಲ್ಲಿ (Kudapur ATR) ಮರಬಳಕೆ ಮಾಡಬಹುದಾದ ಲಾಂಚ್ ವೆಹಿಕಲ್ (ಆರ್ ಎಲ್ ವಿ) ಎಲ್ ಈ ಎಕ್ಸ್ ನ (ELX RLV) ಮೂರನೇ ಮತ್ತು ಅಂತಿಮ ಹಂತದ ಲ್ಯಾಂಡಿಂಗ್ ಪ್ರಯೋಗವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ ಎಂದು ಇಸ್ರೋ ಹೇಳಿದೆ.
ನಿಮ್ಮ ಕಾಮೆಂಟ್ ಬರೆಯಿರಿ