ಇಂದು ನಿಗದಿಯಾಗಿದ್ದ ನೀಟ್-ಪಿಜಿ ಪರೀಕ್ಷೆ ದಿಢೀರ್‌ ಮುಂದೂಡಿಕೆ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಪರೀಕ್ಷಾ ಅಕ್ರಮಗಳ ಬಗ್ಗೆ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಜೂನ್ 23 ರಂದು ನಡೆಯಬೇಕಿದ್ದ ನೀಟ್-ಪಿಜಿ ಪ್ರವೇಶ ಪರೀಕ್ಷೆಯನ್ನು (NEET PG) ದಿಢೀರ್‌ ಮುಂದೂಡಲಾಗಿದೆ. ಆರೋಗ್ಯ ಸಚಿವಾಲಯ ಈ ನಿರ್ಧಾರ ಪ್ರಕಟಿಸಿದ್ದು, ಪರೀಕ್ಷೆಯ ಹೊಸ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ತಿಳಿಸಿದೆ.
ನೀಟ್-ಪಿಜಿ (NEET-UG) ಮತ್ತು ಯುಜಿಸಿ-ನೆಟ್‌ (UGC-NET) ಪರೀಕ್ಷೆಗಳಲ್ಲಿನ ಅಕ್ರಮಗಳ ಕುರಿತಾದ ಬೃಹತ್ ವಿವಾದ ಉಲ್ಲೇಖಿಸಿದ ಸರ್ಕಾರವು “ವೈದ್ಯಕೀಯ ವಿದ್ಯಾರ್ಥಿಗಳ ರಾಷ್ಟ್ರೀಯ ಪರೀಕ್ಷಾ ಮಂಡಳಿಯು ನಡೆಸಿದ ನೀಟ್-ಪಿಜಿ (NEET-PG) ಪ್ರಕ್ರಿಯೆಗಳ ದೃಢತೆಯ ಸಂಪೂರ್ಣ ಮೌಲ್ಯಮಾಪನವನ್ನು ಕೈಗೊಳ್ಳಲು ನಿರ್ಧರಿಸಿದೆ” ಎಂದು ಹೇಳಿದೆ.

“ಮುಂಜಾಗ್ರತಾ ಕ್ರಮವಾಗಿ ಜೂನ್ 23ರಂದು ನಡೆಯಲಿರುವ ನೀಟ್-ಪಿಜಿಯನ್ನು ಮುಂದೂಡಲು ನಿರ್ಧರಿಸಲಾಗಿದೆ. ಈ ಪರೀಕ್ಷೆಯ ನೂತನ ದಿನಾಂಕವನ್ನು ಶೀಘ್ರವಾಗಿ ತಿಳಿಸಲಾಗುವುದು. ಪ್ರಾಮಾಣಿಕವಾಗಿ ವಿದ್ಯಾರ್ಥಿಗಳಿಗೆ ಉಂಟಾದ ಅನಾನುಕೂಲತೆಗೆ ವಿಷಾದಿಸುತ್ತೇವೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮತ್ತು ಪರೀಕ್ಷೆಯ ಪಾವಿತ್ರ್ಯತೆ ಕಾಪಾಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸರ್ಕಾರ ಹೇಳಿದೆ.

ಪರೀಕ್ಷೆಯನ್ನು ಮುಂದೂಡುವುದನ್ನು ಪ್ರಕಟಿಸುವ ಒಂದು ಗಂಟೆ ಮೊದಲು, ಸರ್ಕಾರವು ಆದೇಶವನ್ನು ಹೊರಡಿಸಿ ನೀಟ್‌-ಯುಜಿ (NEET-UG) ಮತ್ತು ಯುಜಿಸಿ-ನೆಟ್‌ (UGC-NET) ಪರೀಕ್ಷೆ ನಡೆಸುವ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ (NTA) ಮುಖ್ಯಸ್ಥರನ್ನು ಬದಲಾಯಿಸಲಾಗಿದೆ ಎಂದು ಹೇಳಿದೆ.
ನೀಟ್-ಪಿಜಿ ಪ್ರವೇಶ ಪರೀಕ್ಷೆಯ ಸಮಗ್ರತೆಯನ್ನು ಕಾಪಾಡಿಕೊಳ್ಳಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ. ಪರೀಕ್ಷಾ ಪ್ರಕ್ರಿಯೆಗಳ ನ್ಯಾಯಸಮ್ಮತತೆಯನ್ನು ಖಚಿತಪಡಿಸಿಕೊಳ್ಳಲು ಸಮಗ್ರ ಮೌಲ್ಯಮಾಪನ ನಡೆಸಲು ನಿರ್ಧರಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಪ್ರಮುಖ ಸುದ್ದಿ :-   ಬೆಂಗಳೂರು ಬಳಿ ಯುವತಿಗೆ ಕಿರುಕುಳ ನೀಡಿ, ಹಲ್ಲೆಗೈದ ಗ್ಯಾಂಗ್ ; ಕೃತ್ಯ ಸಿಸಿಟಿವಿಯಲ್ಲಿ ಸೆರೆ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement