ಪುನಃ ಸೋದರಳಿಯನನ್ನೇ ತಮ್ಮ ಉತ್ತರಾಧಿಕಾರಿಯಾಗಿ ಮರುನೇಮಕ ಮಾಡಿದ ಮಾಯಾವತಿ

ನವದೆಹಲಿ : ಬಹುಜನ ಸಮಾಜವಾದಿ ಪಕ್ಷ (ಬಿಎಸ್‌ಪಿ)ದ ಮುಖ್ಯಸ್ಥೆ ಮಾಯಾವತಿ ಅವರು ತಮ್ಮ ಸೋದರಳಿಯ ಆಕಾಶ ಆನಂದ ಅವರನ್ನು ಮತ್ತೆ ಪಕ್ಷದಲ್ಲಿ ತಮ್ಮ ಉತ್ತರಾಧಿಕಾರಿಯನ್ನಾಗಿ ನೇಮಕ ಮಾಡಿದ್ದಾರೆ.
ಲೋಕಸಭೆ ಚುನಾವಣೆಯ ಸಮಯದಲ್ಲೇ ಮಾಯಾವತಿ ಅವರು ತಮ್ಮ ಸೋದರಳಿಯ ಆಕಾಶ ಆನಂದ (28) ಅವರನ್ನು ಪಕ್ಷದ ರಾಷ್ಟ್ರೀಯ ಸಂಯೋಜಕ ಹುದ್ದೆಯಿಂದ ಮತ್ತು ತಮ್ಮ ಉತ್ತರಾಧಿಕಾರಿ ಸ್ಥಾನದಿಂದ ತೆಗೆದುಹಾಕಿದ್ದರು. ಇದೀಗ ಮತ್ತೆ ತಮ್ಮ ಉತ್ತರಾಧಿಕಾರಿ ಸ್ಥಾನಕ್ಕೆ ಅವರನ್ನು ಆಯ್ಕೆ ಮಾಡಿದ್ದಾರೆ.
ಉತ್ತರಾಖಂಡ ಹಾಗೂ ಪಂಜಾಬ್‌ನಲ್ಲಿ ವಿಧಾನಸಭಾ ಉಪಚುನಾವಣೆಗಳು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಆಕಾಶ ಆನಂದ ಅವರನ್ನು ಮತ್ತೆ ರಾಜಕೀಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಸಿದ್ಧತೆ ನಡೆದಿದೆ.

ಈ ಎರಡೂ ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಉಪಚುನಾವಣೆಯ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಮಾಯಾವತಿ ಅವರ ನಂತರ ಎರಡನೇ ಸ್ಥಾನದಲ್ಲಿ ಆಕಾಶ ಹೆಸರು ಇದೆ.
ಬಿಜೆಪಿ ಪಕ್ಷವನ್ನು ತಾಲಿಬಾನ್‌ಗೆ ಹೋಲಿಸಿದ ಕೆಲವು ದಿನಗಳ ಬಳಿಕ ಆಕಾಶ ಅವರನ್ನು ಬಿಎಸ್‌ಪಿಯ ಎರಡು ಪ್ರಮುಖ ಹುದ್ದೆಗಳಿಂದ ವಜಾಗೊಳಿಸಲಾಗಿತ್ತು. ಜೊತೆಗೆ ಆಕಾಶ ರಾಜಕೀಯದಲ್ಲಿ ಇನ್ನೂ ಅಪ್ರಬುದ್ಧ ಎಂದು ಮಾಯಾವತಿ ಹೇಳಿದ್ದರು. ಮಾಯಾವತಿ ಈಗ ಪುನಃ ತಮ್ಮ ಸೋದರಳಿಯ ಆಕಾಶ ಆನಂದ ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ಆಯ್ಕೆ ಮಾಡಿದ್ದಾರೆ.

ಪ್ರಮುಖ ಸುದ್ದಿ :-   ಭಾರತ-ಪಾಕಿಸ್ತಾನ ಸಂಬಂಧ ಹದಗೆಟ್ಟ ಮಧ್ಯೆ ಪಾಕ್‌ ಜತೆ ಟ್ರಂಪ್ ಕುಟುಂಬದ ರಹಸ್ಯ ಕ್ರಿಪ್ಟೋ ಒಪ್ಪಂದ...! ಇದಕ್ಕೆ ಪಾಕ್‌ ಸೇನಾ ಮುಖ್ಯಸ್ಥರ ಮಧ್ಯಸ್ಥಿಕೆ ?!

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement