ವೀಡಿಯೊ..| ʼಪುಷ್ಪಕʼ ಸುರಕ್ಷಿತ ಲ್ಯಾಂಡಿಂಗ್‌ ಪ್ರಯೋಗ ಯಶಸ್ವಿ : ಇಸ್ರೊದ ಹ್ಯಾಟ್ರಿಕ್‌ ಸಾಧನೆ

ಚಿತ್ರದುರ್ಗ : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಮತ್ತೊಂದು ಮಹತ್ವದ ಸಾಧನೆ ಮಾಡಿದೆ. ಇಸ್ರೋದ ಮರುಬಳಕೆ ಮಾಡಬಹುದಾದ ಉಡಾವಣಾ ವಾಹನದ ಸ್ವಯಂಚಾಲಿತ ಲ್ಯಾಂಡಿಂಗ್ ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಿದೆ. ಚಿತ್ರದುರ್ಗದಲ್ಲಿರುವ ಇಸ್ರೋದ ಏರೋನಾಟಿಕಲ್ ಪರೀಕ್ಷಾ ವಲಯದಲ್ಲಿ ಈ ಕಾರ್ಯಾಚರಣೆ ಭಾನುವಾರ ಯಶಸ್ವಿಯಾಗಿ ನಡೆದಿದ್ದು, ಈ ಕುರಿತು ಇಸ್ರೋ ಟ್ವೀಟ್‌ ಮೂಲಕ ಮಾಹಿತಿ ನೀಡಿದೆ.
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕುದಾಪುರ ಗ್ರಾಮದಲ್ಲಿರುವ ಇಸ್ರೋ ಸಂಸ್ಥೆಯ ಏರೋನಟಕಲ್‌ ಟೆಸ್ಟ್‌ ರೇಂಜ್‌ (ATR) ಆವರಣದ ರನ್‌ ವೇನಲ್ಲಿ ಭಾನುವಾರ ಬೆಳಗ್ಗೆ 7:10 ಗಂಟೆ ವೇಳೆ ನಡೆಸಿರುವ ಪ್ರಯೋಗ ಯಶಸ್ವಿಯಾಗಿದೆ ಎಂದು ಇಸ್ರೋ ತನ್ನ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.

ಚಳ್ಳಕೆರೆ ಬಳಿಯ ಎಟಿಆರ್​ನಲ್ಲಿ (ಏರೋನಾಟಿಕಲ್ ಟೆಸ್ಟ್ ರೇಂಜ್) ಇಸ್ರೋದ ‘ಪುಷ್ಪಕ’ ಆರ್​ಎಲ್​ವಿ-ಎಲ್​ಇಎಕ್ಸ್​-3 (RLV LEX)ದ ಲ್ಯಾಂಡಿಂಗ್ ಯಶಸ್ವಿಯಾಗಿ ಆಗಿದೆ.
ಉಪಗ್ರಹವನ್ನು ಕಕ್ಷೆಗೆ ಸೇರಿಸಿದ ನಂತರ ಅದು ಯಶಸ್ವಿಯಾಗಿ ಭೂಮಿಗೆ ಲ್ಯಾಂಡ್​​​ ಆಗುವ ರಾಕೆಟ್ ​​​ಅನ್ನು ಇಸ್ರೋ ಅಭಿವೃದ್ಧಿಪಡಿಸಿದ್ದು, ಚಿತ್ರದುರ್ಗದಲ್ಲಿರುವ ಏರೋನಾಟಿಕಲ್ ಟೆಸ್ಟ್ ರೇಂಜ್ ನಲ್ಲಿ ಈ ಮರುಬಳಕೆ ಮಾಡಬಹುದಾದ ಲಾಂಚ್ ವೆಹಿಕಲ್ ಅಟಾನಮಸ್ ಲ್ಯಾಂಡಿಂಗ್ ಮಿಷನ್ (RLV LEX) ಪರೀಕ್ಷೆಯನ್ನು ನಡೆಸಿತು.
ಮರುಬಳಕೆ ಮಾಡಬಹುದಾದ ಉಡಾವಣಾ ವಾಹನ ಲ್ಯಾಂಡಿಂಗ್ ಅನ್ನು ಡಿಆರ್‌ಡಿಒ ಮತ್ತು ಭಾರತೀಯ ವಾಯುಪಡೆಯೊಂದಿಗೆ ಜಂಟಿಯಾಗಿ ಪರೀಕ್ಷಿಸಿದೆ ಎಂದು ಇಸ್ರೋ ಹೇಳಿದೆ.

ಪ್ರಮುಖ ಸುದ್ದಿ :-   ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ 3 ದಿನ ಜೋರಾದ ಗಾಳಿ ಮಳೆಯ ಮುನ್ಸೂಚನೆ

ವಿಶ್ವದಲ್ಲಿಯೇ ಮೊದಲ ಬಾರಿಗೆ ರೆಕ್ಕೆಯ ಉಡಾವಣಾ ವಾಹನವನ್ನು ಹೆಲಿಕಾಪ್ಟರ್ ಮೂಲಕ 4.5 ಕಿ.ಮೀ ಎತ್ತರಕ್ಕೆ ಕೊಂಡೊಯ್ಯಲಾಯಿತು. ಆ ಬಳಿಕ ಆಕಾಶದಿಂದ ರನ್ ವೇ ಮೇಲೆ ಸುರಕ್ಷಿತವಾಗಿ ಲ್ಯಾಂಡ್​ ಮಾಡಲಾಗಿದೆ.
ಭಾನುವಾರ ಬೆಳಗ್ಗೆ 7.10 ಕ್ಕೆ ಅದು ಚಿತ್ರದುರ್ಗ ಜಿಲ್ಲೆಯ ಕುದಾಪುರ ಗ್ರಾಮದಲ್ಲಿರುವ ಎಟಿಆರ್ ನಲ್ಲಿ (Kudapur ATR) ಮರಬಳಕೆ ಮಾಡಬಹುದಾದ ಲಾಂಚ್ ವೆಹಿಕಲ್ (ಆರ್ ಎಲ್ ವಿ) ಎಲ್ ಈ ಎಕ್ಸ್ ನ (ELX RLV) ಮೂರನೇ ಮತ್ತು ಅಂತಿಮ ಹಂತದ ಲ್ಯಾಂಡಿಂಗ್ ಪ್ರಯೋಗವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ ಎಂದು ಇಸ್ರೋ ಹೇಳಿದೆ.

 

 

ಪ್ರಮುಖ ಸುದ್ದಿ :-   ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement