ಇಂದು 12 ಜಿಲ್ಲೆಗಳಲ್ಲಿ ಭರ್ಜರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಸೋಮವಾರ (ಜೂನ್‌ 24) ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂನ್‌ 24 ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ನೀಡಲಾಗಿದೆ. ಚಿಕ್ಕಮಗಳೂರು, ಮಂಡ್ಯ, ಮೈಸೂರು, ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಹಾಗೂ ಬಾಗಲಕೋಟೆ, ಗದಗ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ನೀಡಲಾಗಿದೆ. ಅಲ್ಲದೆ, ಜೂನ್‌ 26ರ ವರೆಗೆ ಅರಬ್ಬಿ ಸಮುದ್ರದಲ್ಲಿ ಗಂಟೆಗೆ 45ರಿಂದ 65 ಕಿ.ಮೀ. ವೇಗದಲ್ಲಿ ಜೋರಾಗಿ ಗಾಳಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂಬ ಎಚ್ಚರಿಕೆಯನ್ನೂ ನೀಡಲಾಗಿದೆ.

ಜೂನ್‌ 25ರಂದು ಆರೆಂಜ್‌, ಯೆಲ್ಲೊ ಅಲರ್ಟ್‌
ಜೂನ್ 25 ರಂದು ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ದಕ್ಷಿಣ ಒಳನಾಡಿನ ಶಿವಮೊಗ್ಗ ಜಿಲ್ಲೆಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಗದಗ ಹಾಗೂ ದಕ್ಷಿಣ ಒಳನಾಡಿನ ಚಾಮರಾಜನಗರ, ದಾವಣಗೆರೆ, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ನೀಡಲಾಗಿದೆ.
ಕರಾವಳಿ ಭಾಗದಲ್ಲಿ ಅತಿ ಮಳೆ ಸೂಚನೆ ಹಿನ್ನೆಲೆಯಲ್ಲಿ ಭಾನುವಾರದಿಂದ (ಜೂ.23ರಿಂದ) ರೆಡ್‌ ಅಲರ್ಟ್‌ ನೀಡಲಾಗಿತ್ತು. ಆದರೆ, ಭಾನುವಾರ ಕರಾವಳಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಬಿಸಿಲು ಆವರಿಸಿಕೊಂಡಿತ್ತು. ಆದರೆ ಮುಂದಿನ ಮೂರ್ನಾಲ್ಕು ದಿನ ಮಳೆ ಆರ್ಭಟಿಸಲಿದೆ ಎಂದು ಹವಾಮಾನ ಇಲಾಖೆ ಮತ್ತೆ ಮುನ್ಸೂಚನೆ ನೀಡಿದೆ.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement