ಯುವಕನಿಗೆ ಲೈಂಗಿಕ ಕಿರುಕುಳ ಪ್ರಕರಣ : ಸೂರಜ್‌ ರೇವಣ್ಣ 8 ದಿನ ಸಿಐಡಿ ಕಸ್ಟಡಿಗೆ

ಬೆಂಗಳೂರು : ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಶಾಸಕ ಎಚ್‌.ಡಿ. ರೇವಣ್ಣ ಅವರ ಹಿರಿಯ ಪುತ್ರ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ಕೋರ್ಟ್‌ 8 ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿದೆ.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಪ್ರಕರಣವನ್ನು ಭಾನುವಾರ ಸಿಐಡಿಗೆ ವಹಿಸಿಸಿತ್ತು. ಆದರೆ ಅಧಿಕೃತವಾಗಿ ಸಿಐಡಿಗೆ ವರ್ಗಾವಣೆ ಆಗಿರಲಿಲ್ಲ. ಹೀಗಾಗಿ ಸೂರಜ್‌ ರೇವಣ್ಣ ಅವರನ್ನು ಭಾನುವಾರ 42ನೇ ಎಸಿಎಂಎಂ ಕೋರ್ಟ್‌ ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.
ಇಂದು, ಸೋಮವಾರ ಸೂರಜ್‌ ರೇವಣ್ಣ ಅವರನ್ನು ಪೊಲೀಸರು ಕೋರ್ಟ್‌ಗೆ ಹಾಜರು ಪಡಿಸಿದರು.

ವಿಚಾರಣೆ ವೇಳೆ ಸರ್ಕಾರಿ ವಕೀಲರು 14 ದಿನ ಪೊಲೀಸ್‌ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದರು. ಆದರೆ ನ್ಯಾಯಾಧೀಶರು 8 ದಿನ ಪೊಲೀಸ್‌ ಕಸ್ಟಡಿಗೆ ನೀಡಿದರು. ಜುಲೈ 1ರ ಸಂಜೆ 4 ಗಂಟೆಗೆ ಸೂರಜ್‌ ರೇವಣ್ಣ ಅವರನ್ನು ಕೋರ್ಟ್‌ಗೆ ಹಾಜರುಪಡಿಸುವಂತೆ ನ್ಯಾಯಾಧೀಶರು ಸಿಐಡಿ ಪೊಲೀಸರಿಗೆ ಸೂಚಿಸಿದ್ದಾರೆ.
ಸಂತ್ರಸ್ತನ ವಿರುದ್ದ ನೀಡಿದ್ದ ದೂರಿಗೆ ಸಾಕ್ಷಿ ನೀಡಲು ಸೂರಜ್ ರೇವಣ್ಣ ಶನಿವಾರ ಸಂಜೆ ಹಾಸನದ ಸೆನ್ ಠಾಣೆಗೆ ತೆರಳಿದ್ದರು. ಈ ವೇಳೆ ಸೂರಜ್ ರೇವಣ್ಣರನ್ನು ವಶಕ್ಕೆ ಪಡೆದ ಪೊಲೀಸರು ಭಾನುವಾರ ಮುಂಜಾನೆಯವರೆಗೂ ವಿಚಾರಣೆಗೆ ಒಳಪಡಿಸಿದರು. ಭಾನುವಾರ ಬೆಳಗ್ಗೆ ಸೂರಜ್‌ ಅವರನ್ನು ಅಧಿಕೃತವಾಗಿ ಬಂಧಿಸಿದ್ದರು.

ಪ್ರಮುಖ ಸುದ್ದಿ :-   ಶಾಸಕ ಸ್ಥಾನದಿಂದ ಅನರ್ಹಗೊಂಡ ಜನಾರ್ದನ ರೆಡ್ಡಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement