ವೀಡಿಯೊ..| ಸಂಸದರಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ನಾಲ್ವರು ಕೇಂದ್ರ ಸಚಿವರು

ನವದೆಹಲಿ : ಕೇಂದ್ರ ಸಚಿವರಾಗಿರುವ ರಾಜ್ಯದ ಲೋಕಸಭಾ ಸದಸ್ಯರಾದ ಎಚ್.ಡಿ ಕುಮಾರಸ್ವಾಮಿ, ಪ್ರಹ್ಲಾದ ಜೋಶಿ, ವಿ.ಸೋಮಣ್ಣ ಹಾಗೂ ಶೋಭಾ ಕರಂದ್ಲಾಜೆ ಅವರು ಸಂಸದರಾಗಿ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ನೂತನ ಸಂಸತ್‌ ಭವನ ಸೆಂಟ್ರಲ್ ವಿಸ್ಟಾದಲ್ಲಿ ನಡೆಯುತ್ತಿರುವ 18ನೇ ಲೋಕಸಭೆಯ ಮೊದಲ ಅಧಿವೇಶನದ ಆರಂಭದಲ್ಲಿ ಆಯ್ಕೆಯಾದ ನೂತನ ಸಂಸದರಿಗೆ ಹಂಗಾಮಿ ಸ್ಪೀಕರ್ ಭರ್ತೃಹರಿ ಮಹತಾಬ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

ಈ ವೇಳೆ ಕೇಂದ್ರ ಸಚಿವರಾಗಿರುವ ರಾಜ್ಯ ನಾಲ್ವರು ಲೋಕಸಭಾ ಸದಸ್ಯರು ಮಾತೃಭಾಷೆ ಕನ್ನಡದಲ್ಲಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಮೊದಲ ಬಾರಿಗೆ ಸಂಸತ್ ಪ್ರವೇಶಿಸುತ್ತಿರುವ ಸೋಮಣ್ಣ ಅವರು, ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಮೆಟ್ಟಿಲುಗಳಿಗೆ ನಮಸ್ಕರಿಸಿ ಸಂಸತ್ ಪ್ರವೇಶಿಸಿದರು.

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಜಯಗಳಿಸಿರುವ ಎಚ್ ಡಿ ಕುಮಾರಸ್ವಾಮಿ ಅವರಿಗೆ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ, ಧಾರವಾಡ ಕ್ಷೇತ್ರದಿಂದ ಆಯ್ಕೆಯಾಗಿರುವ ಪ್ರಹ್ಲಾದ ಜೋಶಿ ಅವರಿಗೆ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಹೊಸ ಮತ್ತು ನವೀಕರಿಸಬಹುದಾದ ಇಂಧನ ಖಾತೆಗಳ ಕ್ಯಾಬಿನೆಟ್‌ ಸಚಿವ ಸ್ಥಾನ ನೀಡಲಾಗಿದೆ.

ಪ್ರಮುಖ ಸುದ್ದಿ :-   ನನ್ನ ಬ್ಲ್ಯಾಕ್‌ಮೇಲ್ ಮಾಡಲು ಯತ್ನ ; ಇಬ್ಬರ ಪಾತ್ರದ ಬಗ್ಗೆ ತನಿಖೆ : ಸ್ಟಿಂಗ್‌ ಬಗ್ಗೆ ಮೌನ ಮುರಿದ ಸಿದ್ದರಾಮಯ್ಯ

ತುಮಕೂರಿನಿಂದ ಸ್ಪರ್ಧಿಸಿ ಗೆದ್ದಿರುವ ವಿ.ಸೋಮಣ್ಣ ಅವರಿಗೆ ಕಲ್ಲಿದ್ದಲು ಮತ್ತು ಗಣಿ ಹಾಗೂ ರೈಲ್ವೆ ಇಲಾಖೆಯ ರಾಜ್ಯ ಸಚಿವ ಸ್ಥಾನ ನೀಡಲಾಗಿದೆ. ಬೆಂಗಳೂರು ಉತ್ತರದಿಂದ ಜಯಗಳಿಸಿರುವ ಶೋಭಾ ಕರಂದ್ಲಾಜೆ ಅವರಿಗೆ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವ ಸ್ಥಾನ ನೀಡಲಾಗಿದೆ.

ಪ್ರಮುಖ ಸುದ್ದಿ :-   ಸಿದ್ದರಾಮಯ್ಯಗೆ ಬ್ಲ್ಯಾಕ್‌ಮೇಲ್‌ ಮಾಡಲು ಸ್ಟಿಂಗ್ ಆಪರೇಷನ್.. ಇದ್ರಲ್ಲಿ ಕಾಂಗ್ರೆಸ್ಸಿನವರು ಇದ್ದಾರೆ: ಸಚಿವ ಯತೀಂದ್ರ

 

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement