ವೀಡಿಯೊ..| ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕಾಗೇರಿ

ನವದೆಹಲಿ : ನೂತನ ಲೋಕಸಭಾ ಸದಸ್ಯರು ಸೋಮವಾರ ಸಂಸತ್ತಿನ ಮೊದಲ ಅಧಿವೇಶನದಲ್ಲಿ ಕನ್ನಡ ಸೇರಿದಂತೆ ಸಂಸ್ಕೃತ, ಹಿಂದಿ ಸೇರಿದಂತೆ ಹಲವು ಪ್ರಾದೇಶಿಕ ಭಾಷೆಗಳಲ್ಲಿ ಪ್ರಮಾಣ ವಚನ ಸ್ವೀಕರಿಸದರು. ಕೆಲವರು ಇಂಗ್ಲೀಷ್‌ನಲ್ಲೂ ಪ್ರಮಾಣ ವಚನ ಸ್ವೀಕರಿಸಿದರು.  ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾದ ವಿಶ್ವೇಶ್ವರ ಹೆಗಡೆ ಕಾಗೇರಿ ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿ ಗಮನಸೆಳೆದರು. ಎಲ್ಲ ಸಂಸದರಿಗೂ ಹಂಗಾಮಿ ಸ್ವೀಕರ್‌ ಭರ್ತೃಹರಿ ಮೆಹ್ತಾಬ್‌ ಅವರು ಪ್ರಮಾಣ ವಚನ ಬೋಧಿಸಿದರು.

ಕರ್ನಾಟಕದಿಂದ ಆಯ್ಕೆಯಾದ ಸಚಿವ ಎಚ್‌.ಡಿ. ಕುಮಾರಸ್ವಾಮಿ, ಪ್ರಹ್ಲಾದ ಜೋಶಿ, ವಿ. ಸೋಮಣ್ಣ ಹಾಗೂ ಶೋಭಾ ಕರಂದ್ಲಾಜೆ ಅವರು ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಕರ್ನಾಟಕದಿಂದ ಆಯ್ಕೆಯಾದ 28 ನೂತನ ಸಂಸದರಲ್ಲಿ ೨೭ ಸಂಸದರು ಕನ್ನಡದಲ್ಲಿ ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಅವರು ದೇವರ ಹೆಸರಲ್ಲಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.  ವಿಶ್ವೇಶ್ವರ ಹೆಗಡೆ ಕಾಗೇರಿ ಸಂಸ್ಕೃತದಲ್ಲಿ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.

ನವದೆಹಲಿ ಸ್ಥಾನದಿಂದ ಲೋಕಸಭಾ ಸಂಸದರಾಗಿ ಆಯ್ಕೆಯಾದ ದಿವಂಗತ ಸುಷ್ಮಾ ಸ್ವರಾಜ್ ಅವರ ಪುತ್ರಿ ಬಾನ್ಸುರಿ ಸ್ವರಾಜ್ ಅವರು ಸಹ ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.ಈ ಹಿಂದೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಅನಂತ್‌ ಕುಮಾರ್‌ ಹೆಗಡೆ ಅವರು ಸಂಸ್ಕೃತದಲ್ಲೇ ಪ್ರಮಾಣ ವಚನ ಸ್ವೀಕರಿಸಿದ್ದರು.

ಪ್ರಮುಖ ಸುದ್ದಿ :-   ನೆಲಮಂಗಲ ಬಳಿ ರಸ್ತೆ ಜಗಳ-ಹಲ್ಲೆ ಆರೋಪ: ಮಾಜಿ ಸಂಸದ ಅನಂತಕುಮಾರ ಹೆಗಡೆ ಸೇರಿ ಮೂವರ ವಿರುದ್ಧ ಎಫ್‌ಐಆರ್‌

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement