ದೆಹಲಿ ಅಬಕಾರಿ ನೀತಿ ಪ್ರಕರಣ: ಅರವಿಂದ ಕೇಜ್ರಿವಾಲ್ ಬಂಧಿಸಿದ ಸಿಬಿಐ

ನವದೆಹಲಿ : ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಸಿಬಿಐ ಬುಧವಾರ ಅಧಿಕೃತವಾಗಿ ಬಂಧಿಸಿದೆ.
ತನಿಖೆ ನಡೆಸಲು ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಅಮಿತಾಭ ರಾವತ್ ಅವರು ಅನುಮತಿ ನೀಡಿದ ನಂತರ ಕೇಜ್ರಿವಾಲ್ ಅವರನ್ನು ಕೇಜ್ರಿವಾಲ್ ಅವರನ್ನು ಔಪಚಾರಿಕವಾಗಿ ಬಂಧಿಸಿತು.
ಕೇಜ್ರಿವಾಲ್‌ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲು ಸಿಬಿಐ ಸಲ್ಲಿಸಿದ ಮನವಿ ಮತ್ತು ಜೂನ್ 24 ರಂದು ದೆಹಲಿ ಮುಖ್ಯಮಂತ್ರಿ ಅವರನ್ನು ತಿಹಾರ್‌ ಜೈಲಿನಲ್ಲಿ ತನಿಖೆಗೊಳಪಡಿಸಲು ತಾನು ಸಿಬಿಐಗೆ ನೀಡಿದ ಆದೇಶದ ಪ್ರತಿಗಳನ್ನು ಕೇಜ್ರಿವಾಲ್‌ ಅವರಿಗೆ ನೀಡಬೇಕು ಎಂದು ಕೋರ್ಟ್‌ ಹೇಳಿದೆ.
ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಅವರು ಜುಲೈ 20, 2022 ರಂದು ನೀಡಿದ ದೂರಿನ ಮೇರೆಗೆ ಸಿಬಿಐ ಪ್ರಕರಣವನ್ನು ದಾಖಲಿಸಿಕೊಂಡಿತ್ತು.

ಜೂನ್ 25ರಂದು ಜೈಲಿನಲ್ಲಿ ಅರವಿಂದ ಕೇಜ್ರಿವಾಲ್ ಅವರ ಹೇಳಿಕೆಯನ್ನು ಪಡೆದಿದ್ದ ಸಿಬಿಐ ಬುಧವಾರ ವಿಚಾರಣಾ ನ್ಯಾಯಾಲಯದ ಮುಂದೆ ಅವರನ್ನು ಹಾಜರುಪಡಿಸಲು ಅನುಮತಿ ಕೋರಿತು.
ನ್ಯಾಯಾಲಯಕ್ಕೆ ಸಿಬಿಐ ಅರ್ಜಿ ಸಲ್ಲಿಸುವ ಬಗ್ಗೆ ಮತ್ತು ಅವರನ್ನು ಪ್ರಶ್ನಿಸಲು ಆದೇಶ ಪಡೆಯುವ ಬಗ್ಗೆ ತನಗೆ ಮಾಹಿತಿ ನೀಡಿಲ್ಲ ಮಾಧ್ಯಮಗಳಿಂದ ಈ ವಿಚಾರ ತಿಳಿದಿದೆ ಎಂದು ಕೇಜ್ರಿವಾಲ್ ಪರ ವಕೀಲ ವಿವೇಕ್ ಜೈನ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. “ಸಿಬಿಐ ಕ್ರಮ ಆತಂಕಕಾರಿಯಾಗಿದ್ದು, ಈ ಕುರಿತ ದಾಖಲೆಗಳನ್ನು ಅಧ್ಯಯನ ಮಾಡಲು ನ್ಯಾಯಾಲಯ ಅವಕಾಶ ಮಾಡಿಕೊಡಬೇಕು. ಹೀಗಾಗಿ ವಿಚಾರಣೆಯನ್ನು ನಾಳೆಗೆ ಮುಂದೂಡಬೇಕು” ಎಂದು ಕೇಜ್ರಿವಾಲ್ ಪರ ಹಾಜರಾದ ಮತ್ತೊಬ್ಬ ಹಿರಿಯ ವಕೀಲ ವಿಕ್ರಮ್ ಚೌಧರಿ ಮನವಿ ಮಾಡಿದರು. ತನಿಖೆ ನಡೆಸುವುದು ತನ್ನ ಪರಮಾಧಿಕಾರವಾಗಿದ್ದು ಆರೋಪಿಗಳಿಗೆ ಮಾಹಿತಿ ನೀಡಬೇಕೆಂಬ ಕಾನೂನಿನಲ್ಲಿ ಇಲ್ಲ ಎಂದು ಸಿಬಿಐ ಸಮರ್ಥಿಸಿಕೊಂಡಿತು.
ಸಿಬಿಐ ಪರ ವಕೀಲರು ಬಂಧನ ಕುರಿತಂತೆ ತಮ್ಮ ಬಳಿ ಇರುವ ದಾಖಲೆಗಳನ್ನು ಸಲ್ಲಿಸುವುದಾಗಿ ತಿಳಿಸಿದ್ದು ನಂತರ ಕೇಜ್ರಿವಾಲ್‌ ಪರ ವಕೀಲರ ವಾದ ಆಲಿಸುವುದಾಗಿ ಸ್ಪಷ್ಟಪಡಿಸಿದ ನ್ಯಾಯಾಲಯ ದಾಖಲೆಗಳನ್ನು ಒದಗಿಸುವುದರ ಜೊತೆಗೆ ಆದೇಶ ನೀಡುವುದಾಗಿ ಹೇಳಿತು.

ಪ್ರಮುಖ ಸುದ್ದಿ :-   ವಿದೇಶ ಪ್ರವಾಸ, ವಿದೇಶದಲ್ಲಿ ಮದುವೆ ಬೇಡ, ಚಿನ್ನ ಖರೀದಿ ತಗ್ಗಿಸಿ : ದಾಖಲೆ ಆರ್ಥಿಕ ಬೆಳವಣಿಗೆ ನಡುವೆ ಮೋದಿ ಸ್ವದೇಶಿ ಮಂತ್ರ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement