ಭಾರೀ ಮಳೆ : ನಾಳೆ (ಜೂನ್‌ 27) ದಕ್ಷಿಣ ಕನ್ನಡ ಜಿಲ್ಲೆ ಶಾಲೆಗಳಿಗೆ ರಜೆ ಘೋಷಣೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಜೂನ್ 27 ರಂದು ರಜೆ ಘೋಷಣೆ ಮಾಡಲಾಗಿದೆ.
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ 27-06-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿದೆ. ಬುಧವಾರ ಬೆಳಗ್ಗೆಯಿಂದಲೇ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಗುರುವಾರ (ಜೂನ್ 27) ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

ನಿಮ್ಮ ಕಾಮೆಂಟ್ ಬರೆಯಿರಿ

advertisement