ಸೂರಜ್ ರೇವಣ್ಣ ವಿರುದ್ಧ 2ನೇ ಪ್ರಕರಣ ದಾಖಲು

ಹಾಸನ: ಜೆಡಿಎಸ್​ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, 2ನೇ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.
ಹಾಸನ ಜಿಲ್ಲೆಯ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಸೂರಜ್ ರೇವಣ್ಣ ವಿರುದ್ಧ ಎರಡನೇ ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿದೆ. ಸೂರಜ್ ರೇವಣ್ಣ ಅವರ ಆಪ್ತ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಅಚ್ಚರಿ ಎಂದರೆ ಸೂರಜ್ ರೇವಣ್ಣ ಆಪ್ತ ಎಂದು ಹೇಳಲಾದ ಹಾಗೂ ಈ ಹಿಂದೆ ವಿಧಾನ ಪರಿಷತ್‌ ಸದಸ್ಯ ಸೂರಜ್ ರೇವಣ್ಣ ಪರವಾಗಿ ಮೊದಲ ಪ್ರಕರಣದ ಸಂತ್ರಸ್ತ ಎಂದು ಹೇಳಿಕೊಂಡಿರುವ ಕಾರ್ಯಕರ್ತನ ವಿರುದ್ಧ ದೂರು ದಾಖಲಿಸಿದ್ದರು. ಈಗ ಅವರೇ ಸೂರಜ್‌ ರೇವಣ್ಣ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎನ್ನಲಾಗಿದೆ.
ರೇವಣ್ಣ ವಿರುದ್ಧ ಶನಿವಾರ ರಾತ್ರಿ ಮೊದಲ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ಮರುದಿನ ಅವರನ್ನು ಬಂಧಿಸಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು. ಸೋಮವಾರ ನ್ಯಾಯಾಲಯ ಅವರನ್ನು ಎಂಟು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ಪ್ರಮುಖ ಸುದ್ದಿ :-   ವೀಡಿಯೊಗಳು..| ಇರಾನಿನ 6 ವಾಯುನೆಲೆಗಳ ಮೇಲೆ ಇಸ್ರೇಲ್‌ ದಾಳಿ ; 15 ವಿಮಾನಗಳು ನಾಶ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement