ಕರ್ನಾಟಕದ 8 ಜಿಲ್ಲೆಗಳಲ್ಲಿ ಮೂರು ದಿನ ಅಧಿಕ ಮಳೆ : ಮುನ್ಸೂಚನೆ

ಬೆಂಗಳೂರು : ಕರ್ನಾಟಕದ ಎಂಟು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಸೇರಿದಂತೆ ಹಲವೆಡೆ ಅಧಿಕ ಮಳೆ ಸುರಿಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಕರ್ನಾಟಕ ಜಿಲ್ಲೆಗಳಲ್ಲಿ ಪ್ರತ್ಯೇಕ ಬಾರೀ ಮಳೆಯಿಂದ ಅತಿ ಭಾರೀ ಮಳೆ ಆಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಗಂಟೆಗೆ 35 – 45 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ಮೀನುಗಾರರಿಗೆ ಎಚ್ಚರಿಕೆ ನೀಡಿದೆ. ಹಾಗೂ ಭಾರೀ ಅಲೆಗಳು ಏಳುವ ಸಾಧ್ಯತೆ ಇರುವುದರಿಂದ ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಿದೆ.

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌, ಬೆಳಗಾವಿ ಜಿಲ್ಲೆಗೆ ಜೂನ್‌ ೨೭ರಂದು ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಬೀದರ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಲಾಗಿದೆ.
ಎಲ್ಲೆಲ್ಲೆ ಮಳೆಯಾಗಿದೆ….
ಕುಂದಾಪುರದಲ್ಲಿ ಮಾಣಿ 8 ಸೆಂಮೀ, ಆಗುಂಬೆಯಲ್ಲಿ 7 ಸೆಂಮೀ ಮಳೆಯಾಗಿದೆ. ಉಡುಪಿ , ಧರ್ಮಸ್ಥಳ, ಶಿರಾಲಿ, ಮಂಕಿ, ಗೇರುಸೊಪ್ಪ ಪಣಂಬೂರಿನದಲ್ಲಿ ತಲಾ 6 ಸೆಂಮೀ, ಸಿದ್ದಾಪುರ, ಕುಮಟಾ, ಸುಳ್ಯ, ಮಂಗಳೂರು, ಉಪ್ಪಿನಂಗಡಿ, ಕೊಪ್ಪ, ಕೊಟ್ಟಿಗೆಹಾರ, ಕಾರವಾರದಲ್ಲಿ ತಲಾ 5 ಸೆಂಮೀ ಮಳೆಯಾಗಿದೆ.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

 

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement