ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ

ಶಿವಮೊಗ್ಗ : ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆ ಆಗುಂಬೆ ಘಾಟಿಯಲ್ಲಿ ಜೂನ್‌ 27ರಿಂದ ಸೆಪ್ಟೆಂಬರ್‌ 15ರವರೆಗೆ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದು ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಸೂಚಿಸಿದ್ದಾರೆ.
ಮಳೆಗಾಲದ ಅವಧಿಯಲ್ಲಿ ಆಗುಂಬೆ ಘಾಟಿಯಲ್ಲಿ ಭೂಕುಸಿತವಾಗುವ ಸಂಭವ ಇರುವುದರಿಂದ ಜೂನ್‌ 27ರಿಂದ ಸೆಪ್ಟೆಂಬರ್‌ 15ರ ವರೆಗೆ ಭಾರೀ ವಾಹನ ಸಂಚಾರ ನಿಷೇಧಿಸಲಾಗಿದೆ. ಆದೇಶಿಸಲಾಗಿದೆ. ಉಡುಪಿಗೆ ಹೋಗುವ ಭಾರೀ ವಾಹನಗಳು ತೀರ್ಥಹಳ್ಳಿ -ಮಾಸ್ತಿಕಟ್ಟೆ- ಸಿದ್ದಾಪುರ-ಕುಂದಾಪುರ ಮೂಲಕ ಉಡುಪಿ ತಲುಪಬಹುದು. ಉಡುಪಿಯಿಂದ ತೀರ್ಥಹಳ್ಳಿ ಬರುವವರು ಉಡುಪಿ-ಕುಂದಾಪುರ-ಸಿದ್ದಾಪುರ-ಮಾಸ್ತಿಕಟ್ಟೆ ಮೂಲಕ ತೀರ್ಥಹಳ್ಳಿಗೆ ಸಂಚರಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಶಿರಸಿ-ಕುಮಟಾ ರಸ್ತೆಯಲ್ಲಿ ರಾತ್ರಿ ಸಂಚಾರ ನಿಷೇಧ

ನಿಮ್ಮ ಕಾಮೆಂಟ್ ಬರೆಯಿರಿ

advertisement