ಮಾಜಿ ಉಪಪ್ರಧಾನಿ ಎಲ್.​ಕೆ. ಅಡ್ವಾಣಿ ಆರೋಗ್ಯ ಸ್ಥಿರ; ಆಸ್ಪತ್ರೆಯಿಂದ ಡಿಸ್ಚಾರ್ಜ್

ನವದೆಹಲಿ: ಹಿರಿಯ ಬಿಜೆಪಿ ನಾಯಕ ಹಾಗೂ ಮಾಜಿ ಉಪಪ್ರಧಾನಿ  ಲಾಲಕೃಷ್ಣ ಅಡ್ವಾಣಿ ಅವರು ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂಎಸ್) ನಿಂದ ಗುರುವಾರ ಡಿಸ್ಚಾರ್ಜ್ ಆಗಿದ್ದಾರೆ.
96 ವರ್ಷದ ಎಲ್‌.ಕೆ.ಅಡ್ವಾಣಿ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಅಡ್ವಾಣಿ ಅವರ ಅಧಿಕೃತ ವೈದ್ಯ ಡಾ ಸಂಜಯ್ ಲಾಲ್ವಾನಿ ಖಚಿತಪಡಿಸಿದ್ದಾರೆ.
ಬುಧವಾರ ರಾತ್ರಿ ಅಡ್ವಾಣಿ ಅವರನ್ನು ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಇರಿಸಲಾಗಿತ್ತು. ಅವರು ಸ್ಥಿರವಾಗಿದ್ದಾರೆ ಎಂದು ಆಸ್ಪತ್ರೆ ತಿಳಿಸಿದೆ.
“ಎಲ್ ಕೆ ಅಡ್ವಾಣಿ ಅವರು ಸ್ಥಿರವಾಗಿದ್ದಾರೆ. ಹೃದ್ರೋಗ, ಮೂತ್ರಶಾಸ್ತ್ರ (Urology) ಮತ್ತು ಜೆರಿಯಾಟ್ರಿಕ್ ಮೆಡಿಸಿನ್ ಸೇರಿದಂತೆ ವಿವಿಧ ವಿಶೇಷತೆಗಳ ವೈದ್ಯರ ತಂಡವು ಅವರನ್ನು ಮೌಲ್ಯಮಾಪನ ಮಾಡುತ್ತಿದೆ” ಎಂದು ಹೇಳಲಾಗಿದೆ.
ದೇಶದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ಈ ವರ್ಷ ಅಡ್ವಾಣಿ ಅವರಿಗೆ ನೀಡಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಡ್ವಾಣಿಯವರಿಗೆ ಅವರ ಮನೆಯಲ್ಲಿ ಭಾರತ ರತ್ನವನ್ನು ಪ್ರದಾನ ಮಾಡಿದ್ದರು. ಔಪಚಾರಿಕ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಜಗದೀಪ್ ಧನಕರ, ರಕ್ಷಣಾ ಸಚಿವ ರಾಜನಾಥ ಸಿಂಗ್, ಗೃಹ ಸಚಿವ ಅಮಿತ್ ಶಾ ಮತ್ತು ಎಲ್ ಕೆ ಅಡ್ವಾಣಿ ಅವರ ಕುಟುಂಬ ಸದಸ್ಯರು ಉಪಸ್ಥಿತರಿದ್ದರು.

ಪ್ರಮುಖ ಸುದ್ದಿ :-   ಹಲ್ಲಿಲ್ಲದ ಹಾವಿನಿಂದ ಬಯಲಾದ ಗಂಡನ ಕೊಲೆ ಕೃತ್ಯ ; ಪತ್ನಿ-ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement